ಬೆಂಗಳೂರು, ಜು. 06 (DaijiworldNews/MB) : ''ನಾವು ಮತ್ತೆ ಲಾಕ್ಡೌನ್ ಮಾಡುವುದಿಲ್ಲ. ನಾವು ಕೊರೊನಾ ಜೊತೆಯಲ್ಲೇ ಬದುಕಬೇಕಾಗಿದೆ. ಕೊರೊನಾ ತಡೆಗೆ ಸರ್ಕಾರ ಶ್ರಮಿಸುತ್ತಿದೆ'' ಎಂದು ಮುಖ್ಯಮಂತ್ರಿ ಬಿ ಎಸ್ ಯಡಿಯೂರಪ್ಪ ತಿಳಿಸಿದ್ದಾರೆ.
ನಗರದಲ್ಲಿ ಮಾಧ್ಯಮದೊಂದಿಗೆ ಮಾತನಾಡಿದ ಅವರು, ''ಯಾರೂ ಕೂಡಾ ಬೆಂಗಳೂರು ಬಿಟ್ಟು ಹೋಗಬೇಡಿ. ಕೊರೊನಾ ತಡೆಗಾಗಿ ಸರ್ಕಾರ ಎಲ್ಲಾ ರೀತಿಯ ಪ್ರಯತ್ನ ಮಾಡುತ್ತಿದೆ. ನಾವು ಕೊರೊನಾದ ಜೊತೆಯೇ ಬದುಕಬೇಕಾಗಿದೆ. ಜನರು ಯಾವುದೇ ಗಾಬರಿಯಾಗಬಾರದು. ಇದನ್ನೇ ಪ್ರಧಾನಿ ನರೇಂದ್ರ ಮೋದಿ ಅವರು ಕೂಡ ಹೇಳಿದ್ದಾರೆ. ಹಾಗಾಗಿ ಎಲ್ಲರೂ ಸಾಮಾಜಿಕ ಅಂತರ ಕಾಯ್ದುಕೊಂಡು ಸರ್ಕಾರದ ಜೊತೆ ಸಹಕರಿಸಬೇಕು'' ಎಂದು ಮನವಿ ಮಾಡಿದ್ದಾರೆ.
ಹಾಗೆಯೇ ''ವೈದ್ಯಕೀಯ ಉಪಕರಣಗಳ ಖರೀದಿಯಲ್ಲಿ ಯಾವುದೇ ಅವ್ಯವಹಾರ ನಡೆದಿರುವುದು ಕಂಡುಬಂದ್ದಲ್ಲಿ ಅಧಿಕಾರಿಗಳು ಅಥವಾ ಯಾವುದೇ ವ್ಯಕ್ತಿಗಳ ವಿರುದ್ಧ ಕಠಿಣ ಕ್ರಮ ಕೈಗೊಳ್ಳಲಾಗುವುದು'' ಎಂದು ತಿಳಿಸಿದ್ದಾರೆ.