ಬೆಂಗಳೂರು, ಜು 06 (Daijiworld News/MSP): ರಾಜ್ಯದಲ್ಲಿ ಕೊರೊನಾ ಸೋಂಕಿತರ ಸಂಖ್ಯೆ ಗಣನೀಯವಾಗಿ ಏರಿಕೆಯಾಗುತ್ತಿರುವ ನಡುವೆ ಮತ್ತೆ ರಾಜ್ಯ ಸರ್ಕಾರ ಕೊರೊನಾ ಹರಡುವುದನ್ನು ನಿಯಂತ್ರಿಸಲು ರಾಜ್ಯ ಸರ್ಕಾರ ಕ್ವಾರಂಟೈನ್ ನಿಯಮವನ್ನು ಬದಲಾವಣೆ ಮಾಡಿ ಆದೇಶ ಹೊರಡಿಸಿದೆ.
ಈ ಹಿಂದೆ ಚಾಲ್ತಿಯಲ್ಲಿ 7 ದಿನಗಳ ಹೋಂ ಕ್ವಾರಂಟೈನ್ ನಿಯಮವನ್ನು 14 ದಿನಕ್ಕೆ ಏರಿಕೆ ಮಾಡಿ ಸರ್ಕಾರ ಆದೇಶ ಹೊರಡಿಸಿದೆ. ಮಹಾರಾಷ್ಟ್ರ ಸೇರಿದಂತೆ ಯಾವುದೇ ರಾಜ್ಯದಿಂದ ಕರ್ನಾಟಕಕ್ಕೆ ಆಗಮಿಸಿದರೇ, ಈ ಹಿಂದೆ ಇದ್ದಂತ 7 ದಿನಗಳ ಬದಲಾಗಿ, 14 ದಿನಗಳ ಕಾಲ ಕಡ್ಡಾಯವಾಗಿ ಹೋಂ ಕ್ವಾರಂಟೈನ್ ಕಡ್ಡಾಯವಾಗಿದೆ ಎಂದು ತಿಳಿಸಿದೆ.
ಈ ಹಿಂದಿನ ನಿಯಮದಂತೆ ರಾಜ್ಯಕ್ಕೆ ಮಹಾರಾಷ್ಟ್ರದಿಂದ ಕರ್ನಾಟಕಕ್ಕೆ ಆಗಮಿಸದವರಾಗಿದ್ದರೆ 7 ದಿನ ಸಾಂಸ್ಥಿಕ ಕ್ವಾರಂಟೈನ್, 7 ದಿನ ಹೋಂ ಕ್ವಾರಂಟೈನಲ್ಲಿ ಇರುವುದು ಕಡ್ಡಾಯವಾಗಿತ್ತು. ಆದರೆ ಹೊಸ ಆದೇಶದ ಪ್ರಕಾರ ಯಾವುದೇ ರಾಜ್ಯದಿಂದ ಕರ್ನಾಟಕಕ್ಕೆ ಬಂದರೂ 14 ದಿನಗಳ ಕಾಲ ಹೋಂ ಕ್ವಾರಂಟೈನ್ ನಲ್ಲಿ ಇರುವುದು ಕಡ್ಡಾಯವಾಗಿದೆ.