ಬೆಂಗಳೂರು, ಜು 07 (DaijiworldNews/PY): ಸಿದ್ದರಾಮಯ್ಯ ಅವರು ಕೊರೊನಾಗೆ ಸಂಬಂಧಪಟ್ಟ ಉಪಕರಣಗಳ ಖರೀದಿಯ ಬಗ್ಗೆ ಅನಾವಶ್ಯಕವಾಗಿ ಆರೋಪ ಮಾಡುತ್ತಿದ್ದಾರೆ. ವಿಧಾನಸೌಧಕ್ಕೆ ಬಂದು ಅವರು ಪರಿಶೀಲನೆ ಮಾಡುವುದಾದರೆ, ಅದರ ಅಗತ್ಯವಾದ ವ್ಯವಸ್ಥೆ ಮಾಡುತ್ತೇನೆ ಎಂದು ಸಿಎಂ ಬಿಎಸ್ವೈ ಹೇಳಿದ್ದಾರೆ.
ಸೋಮವಾರ ಜಗಜೀವನರಾಂ ಪುಣ್ಯತಿಥಿ ಅಂಗವಾಗಿ ವಿಧಾನಸೌಧದ ಪಶ್ಚಿಮ ದ್ವಾರದ ಬಳಿ ಇರುವ ಜಗಜೀವನರಾಂ ಪ್ರತಿಮೆಗೆ ಸೋಮವಾರ ಮಾಲಾರ್ಪಣೆ ಮಾಡಿದ ನಂತರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಸಿದ್ದರಾಮಯ್ಯ ಅವರು ಇಷ್ಟು ದಿನ ಮಾಡಿದ ಟೀಕೆಗಳನ್ನು ಕೇಳಿಕೊಂಡು ಮೌನವಹಿಸಿದ್ದೆ. ಕೊರೊನಾಕ್ಕೆ ಸಂಬಂಧಪಟ್ಟ ವೈದ್ಯಕೀಯ ಉಪಕರಣಗಳ ಖರೀದಿಯಲಗಲಿ ಯಾವುದೇ ಹಗರಣವಾಗಿಲ್ಲ. ಸಿದ್ದರಾಮಯ್ಯ ಅವರು ವಿಧಾನಸೌಧಕ್ಕೆ ಬಂದು ದಾಖಲೆಗಳನ್ನು ಪರಿಶೀಲನೆ ಮಾಡಲಿ ಎಂದು ಸವಾಲು ಹಾಕಿದರು.
ಈ ವಿಚಾರಕ್ಕೆ ಸಂಬಂಧಪಟ್ಟಂತೆ ಲೋಪದೋಷ ಕಂಡುಬಂದಲ್ಲಿ ಯಾರೇ ತಪ್ಪು ಮಾಡಿದ್ದಲ್ಲಿ ಅವರ ವಿರುದ್ದ ಕಠಿಣ ಕ್ರಮ ತೆಗೆದುಕೊಳ್ಳುತ್ತೇನೆ ಎಂದರು.