ಬೆಂಗಳೂರು, ಜು 07 (Daijiworld News/MSP): ಬೆಂಗಳೂರು ಬಸವನಗುಡಿಯ ಗುರು ರಾಘವೇಂದ್ರ ಕೋ-ಆಪರೇಟಿವ್ ಬ್ಯಾಂಕ್ ಮತ್ತು ಗುರುಸಾರ್ವಭೌಮ ಕೋ ಆಪರೇಟಿವ್ ಸೊಸೈಟಿಗಳ ಬಹುಕೋಟಿ ವಂಚನೆ ಪ್ರಕರಣ ಸಿಐಡಿ ತನಿಖೆ ನಡೆದಿದೆ. ಇದರ ಬೆನ್ನಲ್ಲೇ ಬ್ಯಾಂಕಿನ ನಿವೃತ್ತ ಸಿಇಒ ವಾಸುದೇವ ಮಯ್ಯ(62) ವಿಷ ಸೇವಿಸಿ ಆತ್ಮಹತ್ಯೆಗೆ ಶರಣಾಗಿದ್ದಾರೆ.
ಸುಬ್ರಹ್ಮಣ್ಯಪುರದ ಪೂರ್ಣಪ್ರಜ್ಞಾ ಲೇಔಟ್ ಬಳಿ ಉತ್ತರಹಳ್ಳಿ ರಸ್ತೆಯಲ್ಲಿ ತಮ್ಮ ಕಾರಿನಲ್ಲಿ ವಿಷ ಸೇವಿಸಿ ವಾಸುದೇವ ಮಯ್ಯ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎನ್ನಲಾಗಿದೆ.
ಬೆಂಗಳೂರಿನಲ್ಲಿ ರಾಘವೇಂದ್ರ ಸಹಕಾರ ಬ್ಯಾಂಕ್ ನಲ್ಲಿ 1 ,400 ಕೋಟಿ ರೂಪಾಯಿಯಷ್ಟು ಅವ್ಯವಹಾರ ನಡೆದಿದ್ದು, ಮಯ್ಯ ರ ಮೇಲೆ ಪ್ರಕರಣ ದಾಖಲಾಗಿತ್ತು. 20 ದಿನಗಳ ಹಿಂದೆ ಸಿ ಸಿಬಿ ದಾಳಿ ನಡೆದಿದ್ದು ಇದೀಗ ಪ್ರಕರಣದಲ್ಲಿ ತಮ್ಮ ವಿರುದ್ಧ ಸಾಕ್ಷಿಗಳು ಬಲಗೊಂಡ ಹಿನ್ನೆಲೆಯಲ್ಲಿ ಆತ್ಮಹತ್ಯೆಗೆ ಶರಣಾಗಿರಬಹುದು ಎಂಬ ಮಾತು ಕೇಳಿ ಬರುತ್ತಿದ್ದೆ. ಸುಬ್ರಹಣ್ಯಪುರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಸ್ಥಳಕ್ಕೆ ಪೊಲೀಸರು ದೌಡಾಯಿಸಿದ್ದಾರೆ.