ಬೆಂಗಳೂರು, ಜು 07 (Daijiworld News/MSP): ಕೊರೊನಾ ನಿಯಂತ್ರಣಕ್ಕೆ ಇರುವ ಏಕೈಕ ಮಾರ್ಗವೆಂದರೆ ಸೋಂಕು ಪರೀಕ್ಷೆ ಎನ್ನುವುದು ವಿಶ್ವದಾದ್ಯಂತ ತಜ್ಞರು ಹೇಳುತ್ತಿದ್ದಾರೆ .ಆದರೆ ರಾಜ್ಯದಲ್ಲಿ ಮಾತ್ರ ಸಮುದಾಯ ಮಟ್ಟದಲ್ಲಿ ಸೋಂಕು ಹರಡಿದ್ದರೂ ಸೋಂಕು ಪರೀಕ್ಷೆ ನಡೆಸದೇ ಜನರ ಸಾವಿಗೆ ಕಾರಣವಾಗಿರುವ ಬಿಜೆಪಿ ಸರ್ಕಾರವನ್ನು ಕೊಲೆಗಡುಕ ಸರ್ಕಾರ ಎಂದರೆ ತಪ್ಪಾಗುತ್ತದೆಯೇ ಎಂದು ಪ್ರತಿಪಕ್ಷದ ನಾಯಕ ಸಿದ್ದರಾಮಯ್ಯ ಪ್ರಶ್ನಿಸಿದ್ದಾರೆ.
ರಾಜ್ಯ ಸರ್ಕಾರದ ವಿರುದ್ದ ಸರಣಿ ಟ್ವೀಟ್ ಮಾಡಿ ಹರಿಹಾಯ್ದ ಅವರು ಈ ಕೊರೊನಾ ಓಡಿಸಲು ಜಾಗಟೆ ಬಾರಿಸಿದ ಅಯೋಗ್ಯ ಸರ್ಕಾರಕ್ಕೆ ಸರಿಯಾಗಿ ಸೋಂಕು ಪರೀಕ್ಷೆಯನ್ನು ನಡೆಸಬೇಕು ಎಂದು ಮಾತ್ರ ಗೊತ್ತಾಗುತ್ತಿಲ್ಲಎಂದು ಕಿಡಿಕಾರಿದ್ದಾರೆ.
ರಾಜ್ಯದಲ್ಲಿ ಕೇವಲ 59 ಕೋವಿಡ್ ಪರೀಕ್ಷಾ ಕೇಂದ್ರಗಳಿದ್ದು, ಅವುಗಳ ದಿನದ ಪರೀಕ್ಷಾ ಸಾಮರ್ಥ್ಯ 31,116 ಮಾತ್ರ. ಈಗ ಪ್ರತಿದಿನ ನಡೆಯುತ್ತಿರುವುದು ಕೇವಲ 13, 910 ಪರೀಕ್ಷೆ ಮಾತ್ರ. ಅಂದರೆ ಒಟ್ಟು ಸಾಮರ್ಥ್ಯದ ಶೇಕಡಾ 44.7 ರಷ್ಟು ಮಾತ್ರ ಬಳಕೆ. ರಾಜ್ಯ ಸರ್ಕಾರದ ಅಯೋಗ್ಯತೆಗೆ ಬೇರೆ ಸಾಕ್ಷಿ ಬೇಕೇ? ಎಂದು ಪ್ರಶ್ನಿಸಿದ್ದಾರೆ