ಬೆಂಗಳೂರು, ಜು. 07 (DaijiworldNews/MB) : ರಾಜ್ಯದಲ್ಲಿ ಕೊರೊನಾ ಸೋಂಕು ಸಮುದಾಯ ಹಂತಕ್ಕೆ ತಲುಪಿಲ್ಲ ಎಂದು ಆರೋಗ್ಯ ಸಚಿವ ಬಿ.ಶ್ರೀರಾಮುಲು ತಿಳಿಸಿದ್ದಾರೆ.
ರಾಜ್ಯದಲ್ಲಿ ಇನ್ನು ಕೂಡಾ ಮೊದಲು ಹಾಗೂ ಎರಡನೇ ಹಂತದಲ್ಲಿ ಸೋಂಕು ಇದೆ. ಮೂರನೇ ಹಂತಕ್ಕೆ ಹೋಗಿಲ್ಲ. ಕೇಂದ್ರ ಅಧಿಕಾರಿಗಳ ತಂಡದ ಗಮನಕ್ಕೆ ಈ ವಿಚಾರ ತಂದಿದ್ದೇನೆ ಎಂದು ಹೇಳಿದ್ದಾರೆ.
ಗುತ್ತಿಗೆ ವೈದ್ಯರನ್ನು ಖಾಯಂ ಮಾಡುವ ಬಗ್ಗೆ ಸಭೆ ನಡೆಸಿ ತೀರ್ಮಾನ ಕೈಗೊಂಡು ಹಂತ ಹಂತವಾಗಿ ಖಾಯಂ ಮಾಡಲಾಗುತ್ತದೆ ಎಂದು ತಿಳಿಸಿದ್ದಾರೆ.
ಕೇಂದ್ರದ ತಂಡವು ಕರ್ನಾಟಕ ಸರ್ಕಾರ ಉತ್ತಮವಾದ ಕೆಲಸ ಮಾಡುತ್ತಿದೆ ಎಂದು ತಿಳಿಸಿದೆ. ಕಂಟೈನ್ಮೆಂಟ್ ವಲಯ ಹಾಗೂ ಕೋವಿಡ್ ಕೇರ್ ಸೆಂಟರ್ಗಳಿಗೆ ತೆರಳಿ ಪರಿಶೀಲನೆ ನಡೆಸಿ ಬಳಿಕ ಮತ್ತೊಮ್ಮೆ ಸಿಎಂ ಜೊತೆ ಸಭೆ ನಡೆಸಲಿದ್ದಾರೆ ಎಂದು ಹೇಳಿದ್ದಾರೆ.