ಬೆಂಗಳೂರು, ಜು 08 (DaijiworldNews/PY): ರಾಜ್ಯದಲ್ಲಿ ಕೊರೊನಾ ಪ್ರಕರಗಳ ಸಂಖ್ಯೆ 25 ಸಾವಿರದ ಗಡಿ ದಾಟಿದೆ. ಜು9 ಗುರುವಾರ ಸಚಿವ ಸಂಪುಟ ಸಭೆ ನಡೆಯಲಿದ್ದು, ಈ ನಿಟ್ಟಿನಲ್ಲಿ ಕೊರೊನಾ ನಿಯಂತ್ರಣದ ಬಗ್ಗೆ ಸಭೆಯಲ್ಲಿ ಮಾತುಕತೆ ನಡೆಸಲಿದ್ದಾರೆ.
ರಾಜ್ಯದಲ್ಲಿ ಕೊರೊನಾ ಪ್ರಕರಣ ಸಂಖ್ಯೆ 25 ಸಾವಿರ ದಾಟಿದ್ದು, ಕೊರೊನಾ ವಿರುದ್ದದ ಹೋರಾಟವು ಹೆಚ್ಚು ಪರಿಣಾಮಕಾರಿಯಾಗುವಂತೆ ಪ್ರತಿ ಸಭೆಯಲ್ಲಿ ಸಿಎಂ ಬಿಎಸ್ವೈ ಅವರು ಒತ್ತು ನೀಡುತ್ತಿದ್ದಾರೆ.
ಗುರುವಾರ ರಾಜ್ಯ ಸಚಿವ ಸಂಪುಟ ಸಭೆ ನಡೆಯಲಿದ್ದು, ಕೊರೊನಾ ವಿರುದ್ದದ ಹೋರಾಟವು ಮೊದಲ ಆದ್ಯತೆಯಾಗಿದೆ. ಇನ್ನೊಂದೆಡೆ ರಾಜ್ಯದಲ್ಲಿ ಲಾಕ್ಡೌನ್ ಮಾಡುವುದಿಲ್ಲ ಎಂದು ಸರ್ಕಾರ ತಿಳಿಸಿದೆ.
ಈ ನಡುವೆ ಕೊರೊನಾ ಪ್ರಕರಣಗಳು ಏರಿಕೆಯಾಗುತ್ತಿದ್ದು, ರೋಗಿಗಳಿಗೆ ಸ್ಥಳಾವಕಾಶವನ್ನು ಕಲ್ಪಿಸಲು ಸರ್ಕಾರ ಬೆಂಗಳೂರು ಅಂತಾರಾಷ್ಟ್ರೀಯ ವಸ್ತುಪ್ರದರ್ಶನಾಲಯವನ್ನು ಕೊರೊನಾ ಸೆಂಟರ್ ಆಗಿ ಪರಿವರ್ತನೆ ಮಾಡಲಾಗಿದ್ದು, ಸರ್ಕಾರವು ಸೋಂಕಿತರಿಗೆ ಹೆಚ್ಚಿನ ಸೌಲಭ್ಯಗಳನ್ನು ಕಲ್ಪಿಸುತ್ತಿದೆ ಎನ್ನಲಾಗುತ್ತಿದೆ.
ಡಾ. ಸುದರ್ಶನ್ ಬಲ್ಲಾಳ್ ಮತ್ತು ಇತರ ತಜ್ಞರು ಈ ಬಗ್ಗೆ ಅಭಿಪ್ರಾಯ ವ್ಯಕ್ತಪಡಿಸಿದ್ದು, ಜುಲೈ ಹಾಗೂ ಆಗಸ್ಟ್ ಮಾನ್ಸೂನ್ ತಿಂಗಳಾಗಿದ್ದು, ಸೋಂಕು ಹೆಚ್ಚಿನ ಸಂಖ್ಯೆಯಲ್ಲಿ ಏರಿಕೆಯಾಗಲಿದ್ದು, ಇದು ಸರ್ಕಾರದ ಮುಂದಿರುವ ಹೆಚ್ಚಿನ ಸವಾಲಾಗಿದೆ ಎಂದಿದ್ದಾರೆ.