ನವದೆಹಲಿ, ಜು 08 (DaijiworldNews/PY): ರಾಜೀವ್ ಗಾಂಧಿ ಫೌಂಡೇಶನ್ಗೆ ಸೇರಿದಂತ ಮೂರು ಟ್ರಸ್ಟ್ಗಳ ವಿರುದ್ದ ಕೇಳಿಬಂದಿರುವ ಹಣಕಾಸು ಅವ್ಯವಹಾರ ಆರೋಪಕ್ಕೆ ಸಂಬಂಧಪಟ್ಟಂತೆ ತನಿಖೆಗೆ ಕೇಂದ್ರ ಸರ್ಕಾರ ಸಮಿತಿ ರಚನೆ ಮಾಡಿದೆ.
ಈ ಬಗ್ಗೆ ಗೃಹ ಸಚಿವಾಲಯದ ವಕ್ತಾರರು ಟ್ವೀಟ್ ಮಾಡಿದ್ದು, ರಾಜೀವ್ ಗಾಂಧಿ ಫೌಂಡೇಶನ್, ರಾಜೀವ್ ಗಾಂಧಿ ಚಾರಿಟೇಬಲ್ ಟ್ರಸ್ಟ್ ಮತ್ತು ಇಂದಿರಾ ಗಾಂಧಿ ಸ್ಮಾರಕ ಟ್ರಸ್ಟ್ನ ಹಣ ವರ್ಗಾವಣೆ ತಡೆ ಕಾಯ್ದೆ, ಆದಾಯ ತೆರಿಗೆ ಕಾಯ್ದೆ, ಎಫ್ಸಿಆರ್ಎ ಮುಂತಾದ ವಿವಿಧ ಕಾನೂನು ನಿಬಂಧನೆಗಳ ಉಲ್ಲಂಘನೆಯ ತನಿಖೆಯನ್ನು ಸಂಘಟಿಸಲು ಎಂಎಚ್ಎ ಅಂತರ್ ಸಚಿವಾಲಯದ ಸಮಿತಿಯನ್ನು ರಚಿಸಿದೆ ಎಂದಿದ್ದಾರೆ.
ಜಾರಿ ನಿರ್ದೇಶನಾಲಯದ ವಿಶೇಷ ನಿರ್ದೇಶಕರು ತಂಡದ ಮುಖ್ಯಸ್ಥರಾಗಿರುತ್ತಾರೆ ಎಂದು ಗೃಹ ಸಚಿವಾಲಯದ ವಕ್ತಾರರು ತಿಳಿಸಿದ್ದಾರೆ.
ಮನಮೋಹನ್ ಸಿಂಗ್ ಆಡಳಿತದ ಸಂದರ್ಭ ಯುಪಿಎ ಸರ್ಕಾರ ಅಧಿಕಾರದಲ್ಲಿದ್ದ ವೇಳೆ ರಾಜೀವ್ ಗಾಂಧಿ ಪ್ರತಿಷ್ಠಾನಕ್ಕೆ ಪ್ರಧಾನಮಂತ್ರಿ ರಾಷ್ಟ್ರೀಯ ಪರಿಹಾರ ನಿಧಿಯಿಂದ ಹಣವನ್ನು ನೀಡಿತ್ತು ಎಂಬುದಾಗಿ ಬಿಜೆಪಿ ಅಧ್ಯಕ್ಷ ಜೆ.ಪಿ.ನಡ್ಡಾ ಆರೋಪ ಮಾಡಿದ್ದರು.