ಬೆಂಗಳೂರು, ಜು. 08 (DaijiworldNews/MB) : ರಾಜ್ಯದಲ್ಲಿ ಕೊರೊನಾ ಸೋಂಕಿತರ ಸಂಖ್ಯೆ ದಿನದಿಂದ ದಿನಕ್ಕೆ ತೀವ್ರವಾಗಿ ಏರಿಕೆಯಾಗುತ್ತಲ್ಲೇ ಇದ್ದು ಬುಧವಾರ 2,062 ಮಂದಿಗೆ ಮಂದಿಯಲ್ಲಿ ಕೊರೊನಾ ಸೋಂಕು ಪತ್ತೆಯಾಗಿದೆ. ಹಾಗೆಯೇ ಇಂದು ಒಂದು ದಿನವೇ 54 ಮಂದಿ ಕೊರೊನಾಗೆ ಬಲಿಯಾಗಿದ್ದಾರೆ. ರಾಜ್ಯದಲ್ಲಿ ಸೋಂಕು ಪತ್ತೆಯಾದ ಆರಂಭದಿಂದಲ್ಲೂ ಈವರೆಗೆ ದೃಢಪಟ್ಟ ಸಾವಿನ ಪ್ರಕರಣದಲ್ಲಿ ಇದು ಅತೀ ಹೆಚ್ಚಿನ ಪ್ರಕರಣವಾಗಿದೆ.
ರಾಜ್ಯದಲ್ಲಿ ಕೊರೊನಾ ಸೋಂಕಿತರ ಸಂಖ್ಯೆ 28,877 ಕ್ಕೆ ಏರಿಕೆಯಾಗಿದ್ದು ಈವರೆಗೆ 470 ಮಂದಿ ಕೊರೊನಾದಿಂದಾಗಿ ಸಾವನ್ನಪ್ಪಿದ್ದಾರೆ.
ಇನ್ನು ಇಂದು ದೃಢಪಟ್ಟ 2,062 ಕೊರೊನಾ ಪ್ರಕರಣಗಳ ಪೈಕಿ ಬೆಂಗಳೂರು ನಗರವೊಂದರಲ್ಲೆ 1148 ಮಂದಿಗೆ ಸೋಂಕು ತಗುಲಿದೆ.
ರಾಜ್ಯದಲ್ಲಿ ಇಂದು 778 ಮಂದಿ ಗುಣಮುಖರಾಗಿ ಆಸ್ಪತ್ರೆಯಿಂದ ಬಿಡುಗಡೆಯಾಗಿದ್ದು ಈವರೆಗೆ 11,876 ಮಂದಿ ಗುಣಮುಖರಾಗಿದ್ದಾರೆ. ರಾಜ್ಯದಲ್ಲಿ ಒಟ್ಟು 16,527 ಪ್ರಕರಣ ಸಕ್ರಿಯವಾಗಿದೆ.
ಇನ್ನು ದಕ್ಷಿಣ ಕನ್ನಡ 183, ಧಾರವಾಡ 89, ಕಲಬುರಗಿ 66, ಬಳ್ಳಾರಿ 59 ಹಾಗೂ ಮೈಸೂರು ಜಿಲ್ಲೆಯಲ್ಲಿ 59 ಜನರಲ್ಲಿ ಕೊರೊನಾ ಸೋಂಕು ಪತ್ತೆಯಾಗಿದೆ. ಚಾಮರಾಜನಗರ, ಕೊಡಗು ಜಿಲ್ಲೆಯಲ್ಲಿ ಸೋಂಕು ಪ್ರಕರಣಗಳು ಪತ್ತೆಯಾಗಿಲ್ಲ.