ಬೆಂಗಳೂರು, ಜು 09 (DaijiworldNews/PY): ಜುಲೈ 20 ರ ಸುಮಾರಿಗೆ ದ್ವಿತೀಯ ಪಿಯುಸಿ ಫಲಿತಾಂಶ ಬರಲಿದೆ ಎಂದು ಶಿಕ್ಷಣ ಸಚಿವ ಸುರೇಶ್ ಕುಮಾರ್ ಸ್ಪಷ್ಟಪಡಿಸಿದ್ದಾರೆ.
ಈ ಬಗ್ಗೆ ಟ್ವೀಟ್ ಮಾಡಿರುವ ಅವರು, ಅನೇಕ ವಿದ್ಯಾರ್ಥಿಗಳು ನನಗೆ ಫೋನ್ ಮಾಡಿ 2 ನೇ ಪಿಯುಸಿ ಫಲಿತಾಂಶ ಇಂದು ಬರುತ್ತದೆಯೇ ಎಂದು ಕೇಳುತ್ತಿದ್ದಾರೆ. ಈಗಾಗಲೇ ತಿಳಿಸಿರುವಂತೆ ಎರಡನೇ ಪಿಯುಸಿ ಫಲಿತಾಂಶ ಜುಲೈ 20 ರ ಸುಮಾರಿಗೆ ಬರಲಿದೆ ಎಂದು ಮತ್ತೊಮ್ಮೆ ಸ್ಪಷ್ಟ ಪಡಿಸುತ್ತಿದ್ದೇನೆ ಎಂದಿದ್ದಾರೆ.