ಬೆಂಗಳೂರು, ಜು 09 (DaijiworldNews/PY): ಕೆಲವು ಜಿಲ್ಲೆಗಳಲ್ಲಿ ಕೊರೊನಾ ನಿಯಂತ್ರಣದಲ್ಲಿದೆ. ಎಲ್ಲಾ ರೀತಿಯ ಮುಂಜಾಗ್ರತಾ ಕ್ರಮ ಕೈಗೊಳ್ಳಲು ಜಿಲ್ಲಾಡಳಿತಕ್ಕೆ ಸೂಚನೆ ನೀಡಲಾಗಿದೆ ಎಂದು ಸಿಎಂ ಯಡಿಯೂರಪ್ಪ ಹೇಳಿದರು.
ಗುರುವಾರ ವಿಧಾನಸೌಧದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಸರ್ಕಾರ ರಾಜ್ಯದಲ್ಲಿ ಕೊರೊನಾ ನಿಯಂತ್ರಿಸಲು ಎಲ್ಲಾ ರೀತಿಯಾದ ಪ್ರಯತ್ನ ಮಾಡುತ್ತಿದೆ. ಇದರೊಂದಿಗೆ 10,100 ಹಾಸಿಗೆಗಳ ಆರೈಕೆ ಕೇಂದ್ರ ಕೂಡಾ ಬಿಐಸಿಇನಲ್ಲಿ ಸಿದ್ದವಾಗಿದೆ. ಕೊರೊನಾ ನಿಯಂತ್ರಣಕ್ಕಾಗಿ ರಾಜ್ಯ ಸರ್ಕಾರ ಕೈಗೊಂಡಿರುವ ನಿರ್ವಹಣಾ ಕಾರ್ಯವನ್ನು ಕೇಂದ್ರ ಶ್ಲಾಘಿಸಿದ ಎಂದು ತಿಳಿಸಿದರು.
ಕೊರೊನಾ ಕೈಮೀರುತ್ತಿದೆಯಾ ಎಂದು ಸುದ್ದಿಗಾರರು ಕೇಳಿದ ಪ್ರಶ್ನೆಗೆ ಪ್ರತಿಕ್ರಿಯಿಸಿದ ಅವರು, ಕೊರೊನಾ ಕೆಲವು ಜಿಲ್ಲೆಗಳಲ್ಲಿ ನಿಯಂತ್ರಣದಲ್ಲಿದೆ. ಇದರೊಂದಿಗೆ ಎಲ್ಲಾ ರೀತಿಯಾದಂತಹ ಮುಂಜಾಗ್ರತಾ ಕ್ರಮ ಕೈಗೊಳ್ಳಲು ಜಿಲ್ಲಾಡಳಿತಕ್ಕೆ ಸೂಚನೆ ನೀಡಲಾಗಿದೆ ಎಂದರು.