ಮೈಸೂರು, ಜು 09 (DaijiworldNews/PY): ಅಪ್ರಾಪ್ತ ಪ್ರೇಮಿಗಳು ಕತ್ತು ಕೊಯ್ದುಕೊಂಡು ಆತ್ಮಹತ್ಯೆಗೆ ಯತ್ನಿಸಿರುವ ಘಟನೆ ನಂಜನಗೂಡು ತಾಲೂಕಿನ ದುಗ್ಗಹಳ್ಳಿ ಗ್ರಾಮದಲ್ಲಿ ನಡೆದಿದೆ.
ಆತ್ಮಹತ್ಯೆಗೆ ಯತ್ನಿಸಿದ ಅಪ್ರಾಪ್ತ ಪ್ರೇಮಿಗಳನ್ನು ದುಗ್ಗಾಹಳ್ಳಿ ಗ್ರಾಮದ ನಿವಾಸಿ ಕಾವ್ಯ ಹಾಗೂ ಕುರಿಹುಂಡಿ ಗ್ರಾಮದ ನಿವಾಸಿ ರವಿ ಎನ್ನಲಾಗಿದೆ.
ಕಾವ್ಯ ಹಾಗೂ ರವಿ ಪರಸ್ಪರ ಪ್ರೀತಿಸುತ್ತಿದ್ದರು. ಇಬ್ಬರು ಬೇರೆ ಬೇರೆ ಜಾತಿಯವರಾದ ಕಾರಣ ಇವರ ವಿವಾಹಕ್ಕೆ ಪೋಷಕರು ಅನುಮತಿ ನೀಡಲ್ಲ. ಈ ಕಾರಣದಿಂದ ಬೇಸತ್ತ ಪ್ರೇಮಿಗಳು ಆತ್ಮಹತ್ಯೆಗೆ ಪ್ರಯತ್ನಿಸಿದ್ದಾರೆ.
ಗುರುವಾರ ಬೆಳಗ್ಗೆ ರವಿ ಮನೆಯಲ್ಲಿ ಯಾರು ಇಲ್ಲದ ಸಂದರ್ಭ ಕಾವ್ಯ ಮನೆಗೆ ತೆರಳಿ ಕತ್ತುಕೊಯ್ದುಕೊಂಡು ಆತ್ಮಹತ್ಯೆ ಮಾಡಿಕೊಳ್ಳಲು ಪ್ರಯತ್ನಿಸಿದ್ದು, ಕಾವ್ಯ ಕೂಡಾ ಕತ್ತುಕೊಯ್ದುಕೊಂಡು ಆತ್ಮಹತ್ಯೆ ಮಾಡಿಕೊಳ್ಳಲು ಯತ್ನಿಸಿದ್ದಾಳೆ.
ತಕ್ಷಣವೇ ಸ್ಥಳೀಯರು ಪೊಲೀಸರಿಗೆ ಹಾಗೂ ಆಂಬುಲೆನ್ಸ್ ಗೆ ಕರೆ ಮಾಡಿ ಮಾಹಿತಿ ನೀಡಿದ್ದಾರೆ. ಸ್ಥಳಕ್ಕೆ ಧಾವಿಸಿದ ಪೊಲೀಸರು ಇಬ್ಬರನ್ನು ಆಸ್ಪತ್ರೆಗೆ ದಾಖಲಿಸಿದ್ದಾರೆ.