ಚಿಕ್ಕಮಗಳೂರು, ಜು.12 (DaijiworldNews/MB) : ಕರ್ನಾಟಕ ಪ್ರವಾಸೋದ್ಯಮ ಸಚಿವ ಸಿ.ಟಿ.ರವಿ ಅವರಿಗೆ ಶನಿವಾರ ಕೊರೊನಾ ಸೋಂಕು ಇರುವುದು ದೃಢಪಟ್ಟಿದ್ದು ಈ ಬಗ್ಗೆ ವೈದ್ಯಕೀಯ ಶಿಕ್ಷಣ ಸಚಿವ ಡಾ.ಸುಧಾಕರ್ ಮಾಧ್ಯಮಗಳಿಗೆ ಮಾಹಿತಿ ನೀಡಿದ್ದಾರೆ.
ಇನ್ನು ಈ ಬಗ್ಗೆ ಟ್ವೀಟ್ ಮಾಡಿರುವ ಸಿ.ಟಿ.ರವಿ ಅವರು, ನಾನು ಕ್ಷೇಮವಾಗಿದ್ದೇನೆ. ಕೋರೋನಾ ಲಕ್ಷಣಗಳಿಲ್ಲ. ಈಗ ಹೋಮ್ ಕ್ವಾರಂಟೈನ್-ನಲ್ಲಿ ಇದ್ದೇನೆ. ಸದ್ಯ ನನ್ನ ತೋಟದ ಮನೆಯಲ್ಲೇ ವಾಕ್ ಮಾಡುತ್ತಿದ್ದೇನೆ ಎಂದು ತಿಳಿಸಿದ್ದಾರೆ.
ರಾಜ್ಯದಲ್ಲಿ ಹಲವು ಜನಪ್ರತಿನಿಧಿಗಳಿಗೆ ಕೊರೊನಾ ಸೋಂಕು ದೃಢಪಟ್ಟಿದೆ. ಮುಖ್ಯಮಂತ್ರಿ ಗೃಹ ಕಚೇರಿಯಲ್ಲಿ ಕೆಲಸ ನಿರ್ವಹಿಸುತ್ತಿದ್ದ ಸಿಬ್ಬಂದಿ, ಸಿಎಂ ಅವರ ಬೆಂಗಾವಲು ವಾಹನದ ಚಾಲಕ ಹಾಗೂ ಧವಳಗಿರಿ ನಿವಾಸದಲ್ಲಿ ಅಡುಗೆ ಕೆಲಸದವನಿಗೆ ಕೊರೊನಾ ಸೋಂಕು ಧೃಡಪಟ್ಟ ಹಿನ್ನಲೆ ಮುಖ್ಯಮಂತ್ರಿಯವರು ಕೂಡಾ ಸ್ವತಃ ಕ್ವಾರಂಟೈನ್ಗೆ ಒಳಗಾಗಿದ್ದಾರೆ ಎಂದು ವರದಿ ತಿಳಿಸಿದೆ.