ನವದೆಹಲಿ, ಜು 12 (DaijiworldNews/PY): ಬಾಲಿವುಡ್ನ ಖ್ಯಾತ ನಟಿ ಐಶ್ವರ್ಯಾ ರೈ ಬಚ್ಚನ್ ಹಾಗೂ ಅವರ ಮಗಳು ಆರಾದ್ಯ ಬಚ್ಚನ್ಗೆ ಕೊರೊನಾ ಸೋಂಕು ದೃಢಪಟ್ಟಿದೆ.
ಐಶ್ವರ್ಯಾ ರೈ ಅವರಿಗೆ ಕೊರೊನಾ ದೃಢಪಟ್ಟಿರುವ ಬಗ್ಗೆ ಮಹಾರಾಷ್ಟ್ರದ ಆರೋಗ್ಯ ಸಚಿವ ರಾಜೇಶ್ ಟೋಪೆ ಟ್ವಿಟ್ಟರ್ನಲ್ಲಿ ತಿಳಿಸಿದ್ದಾರೆ.
ಶನಿವಾರ ಬಾಲಿವುಡ್ನ ಹಿರಿಯ ನಟ ಬಿಗ್ ಬಿ ಎಂದೇ ಖ್ಯಾತಿಯನ್ನು ಪಡೆದಿರುವ ಅಮಿತಾಬ್ ಬಚ್ಚನ್ ಹಾಗೂ ಅವರ ಪುತ್ರ ಅಭಿಷೇಕ್ ಬಚ್ಚನ್ ಅವರಿಗೂ ಕೊರೊನಾ ಸೋಂಕು ಇರುವುದು ದೃಢಪಟ್ಟಿತ್ತು.