ಗುಜರಾತ್, ಜು13 (Daijiworld News/MSP): ಪಾಟೀದಾರ್ ಸಮುದಾಯದ ಮೀಸಲಾತಿ ಹೋರಾಟಗಾರ ಹಾರ್ದಿಕ್ ಪಟೇಲ್ ಅವರನ್ನು ಗುಜರಾತ್ ಕಾಂಗ್ರೆಸ್ ಘಟಕದ ಕಾರ್ಯಕಾರಿ ಅಧ್ಯಕ್ಷರಾಗಿ ನೇಮಕ ಮಾಡಲಾಗಿದೆ. ಈ ಮೂಲಕ ಕಾಂಗ್ರೆಸ್ ಯುವಕರಿಗೆ ಮಣೆ ಹಾಕುವತ್ತ ಒಲವು ತೋರಿರುವುದು ಸ್ಪಷ್ಟವಾಗಿದೆ.
ಇದಲ್ಲದೆ ಮೋದಿ -ಶಾ ಜೋಡಿಗೆ ಗುಜರಾತಿನಲ್ಲಿ ಹಾರ್ದಿಕ್ ಪಟೇಲ್ ಅವರಿಗೆ ತನ್ನ ಜಾತಿ ಬಲದಿಂದ ಪೆಟ್ಟು ನೀಡಲು ಸಾಧ್ಯ. ಮಾತ್ರವಲ್ಲದೆ ಗುಜರಾತ್ನಲ್ಲಿ ಈಗಾಗಲೇ ಕಳೆಗುಂದಿರುವ ಕಾಂಗ್ರೆಸ್ ಪಕ್ಷದ ವರ್ಚಸ್ಸು ಬಲಪಡಿಸಲು ಎಂದು ರಾಜಕೀಯ ವಿಶ್ಲೇಷಕರು ಬಣ್ಣಿಸಿದ್ದಾರೆ.
26 ವರ್ಷದ ಪಟೇಲ್, 2015ರಲ್ಲಿ ಪಾಟೀದರ್ ಸಮುದಾಯಕ್ಕೆ ಮೀಸಲಾತಿಗಾಗಿ ಆಗ್ರಹಿಸಿ ನಡೆದ ಹೋರಾಟದ ನೇತೃತ್ವ ವಹಿಸುವ ಮೂಲಕ ಯುವ ಮುಖಂಡರಾಗಿ ಹೊರಹೊಮ್ಮಿದ್ದರು. ಕಳೆದ ವರ್ಷ ಕಾಂಗ್ರೆಸ್ ಪಕ್ಷ ಸೇರಿದ್ದರು. ಪ್ರಕರಣವೊಂದರಲ್ಲಿ ಆರೋಪ ಕೇಳಿಬಂದ ಹಿನ್ನೆಲೆಯಲ್ಲಿ ಲೋಕಸಭಾ ಚುನಾವಣೆಗೆ ಸ್ಪರ್ಧಿಸಲು ಆಗಿರಲಿಲ್ಲ.