ಅನಂತ್ ನಾಗ್, ಜು.13 (DaijiworldNews/MB) : ಭದ್ರತಾ ಪಡೆ ಹಾಗೂ ಉಗ್ರರ ನಡುವೆ ನಡೆದ ಗುಂಡಿನ ಚಕಮಕಿಯಲ್ಲಿ ಓರ್ವ ಉಗ್ರನನ್ನು ಜಮ್ಮು-ಕಾಶ್ಮೀರದ ಅನಂತ್ ನಾಗ್ ಜಿಲ್ಲೆಯ ಸ್ರಿಗುಫ್ವಾರಾ ಪ್ರದೇಶದಲ್ಲಿ ಸೋಮವಾರ ನಸುಕಿನ ಜಾವದಲ್ಲಿ ಭದ್ರತಾ ಪಡೆ ಹೊಡೆದುರುಳಿಸಿದೆ.
ಜಮ್ಮು ಕಾಶ್ಮೀರ ಪೊಲೀಸರು ಹಾಗೂ ಭದ್ರತಾ ಪಡೆ ಯೋಧರು ಸೇರಿ ಜಂಟಿಯಾಗಿ ನಡೆಸಿದ ಕಾರ್ಯಾಚರಣೆ ಸಂದರ್ಭದಲ್ಲಿ ಉಗ್ರರು ಹಾಗೂ ಪೊಲೀಸ್, ಭದ್ರತಾಪಡೆಗಳ ನಡುವೆ ಗುಂಡಿನ ಚಕಮಕಿ ನಡೆದಿದ್ದು ಈ ಸಂದರ್ಭದಲ್ಲಿ ಇಬ್ಬರು ಉಗ್ರರು ಹತ್ಯೆಯಾಗಿದ್ದಾರೆ.
ಪ್ರಸ್ತುತ ಶೋಧ ಕಾರ್ಯಾಚರಣೆ ಮುಂದುವರೆದಿದೆ ಎಂದು ವರಿಯಾಗಿದೆ.
ಇನ್ನು ಇತ್ತೀಚೆಗೆ ಪಾಕಿಸ್ತಾನ ಮೂಲದ ಲಷ್ಕರ್-ಎ-ತೊಯ್ಬಾ ಉಗ್ರ ಸಂಘಟನೆಯ ಸದಸ್ಯ ಉಸ್ಮಾನ್ ಸೋಪೋರ್ ಭಾಗದಲ್ಲಿ ದಾಳಿ ನಡೆಸಿದ್ದು ಈ ಸಂದರ್ಭದಲ್ಲಿ ಸಿಆರ್ಪಿಎಫ್ ಓರ್ವ ಯೋಧ ಹುತಾತ್ಮರಾಗಿದ್ದರು. ಇದಕ್ಕೆ ಪ್ರತೀಕಾರವಾಗಿ ಭಾನುವಾರ ಮುಂಜಾನೆ ಮೂವರು ಉಗ್ರ ಉಸ್ಮಾನ್ ಸೇರಿದಂತೆ ಮೂವರನ್ನು ಹೊಡೆದುರುಳಿಸಿದೆ.