ಬೆಂಗಳೂರು, ಜು14 (Daijiworld News/MSP): 2019-20 ನೇ ಸಾಲಿನ ದ್ವಿತೀಯ ಪಿಯುಸಿ ವಿದ್ಯಾರ್ಥಿಗಳ ಫಲಿತಾಂಶ ಪ್ರಕಟವಾಗಿದೆ. ಪ್ರಾಥಮಿಕ ಮತ್ತು ಪ್ರೌಢಶಿಕ್ಷಣ ಸಚಿವ ಎಸ್.ಸುರೇಶ್ ಕುಮಾರ್ ಫಲಿತಾಂಶ ಪ್ರಕಟಿಸಿದ್ದಾರೆ.
ಶೈಕ್ಷಣಿಕವಾಗಿ ಜಿಲ್ಲಾವಾರು ಫಲಿತಾಂಶ ನೋಡಿದರೆ ದಕ್ಷಿಣ ಕನ್ನಡ , ಉಡುಪಿ ಜಿಲ್ಲೆ 90.71% ಫಲಿತಾಂಶದೊಂದಿಗೆ ರಾಜ್ಯದಲ್ಲೇ ಪ್ರಥಮ ಸ್ಥಾನ ಪಡೆದುಕೊಂಡಿದೆ. ಎಂದಿನಂತೆ ಈ ಬಾರಿಯೂ ಬಾಲಕಿಯರೇ ಮೇಲುಗೈ ಸಾಧಿಸಿದ್ದಾರೆ.
ಒಟ್ಟು 6,75,277 ವಿದ್ಯಾರ್ಥಿಗಳು ಪರೀಕ್ಷೆ ಬರೆದಿದ್ದು, ಈ ಪೈಕಿ ಹೊಸಬರು 5,56267 ವಿದ್ಯಾರ್ಥಿಗಳು ಪರೀಕ್ಷೆ ಬರೆದಿದ್ದಾರೆ. ಇದರಲ್ಲಿ 3,84,947 ವಿದ್ಯಾರ್ಥಿಗಳು ಉತ್ತೀರ್ಣರಾಗಿದ್ದಾರೆ. ಪುನಾರಾವರ್ತಿತ 91,025 ವಿದ್ಯಾರ್ಥಿಗಳು ಪರೀಕ್ಷೆ ಬರೆದಿದ್ದು, ಇದರಲ್ಲಿ 25,602 ವಿದ್ಯಾರ್ಥಿಗಳು ಉತ್ತೀರ್ಣರಾಗಿದ್ದಾರೆ.
ವಿಜ್ಞಾನ ವಿಭಾಗದಲ್ಲಿ ಶೇ. 76.02 ರಷ್ಟು ವಿದ್ಯಾರ್ಥಿಗಳು ಉತ್ತೀರ್ಣರಾಗಿದ್ದಾರೆ. ವಾಣಿಜ್ಯ ವಿಭಾಗದಲ್ಲಿ ಶೇ,65.52 ರಷ್ಟು ವಿದ್ಯಾರ್ಥಿಗಳು ಉತ್ತೀರ್ಣರಾಗಿದ್ದಾರೆ. ಕಲಾವಿಭಾಗದಲ್ಲಿ ಶೇ. 41.27 ರಷ್ಟು ವಿದ್ಯಾರ್ಥಿಗಳು ಉತ್ತೀರ್ಣರಾಗಿದ್ದಾರೆ.