ಜೈಪುರ,ಜು14 (Daijiworld News/MSP): ರಾಜಸ್ಥಾನದಲ್ಲಿ ಸರ್ಕಾರವನ್ನು ಉಳಿಸುವ ಅನಿವಾರ್ಯತೆ ನಡುವೆ ಸಿಎಂ ಅಶೋಕ್ ಗೆಹ್ಲೋಟ್ ಮತ್ತು ಉಪಮುಖ್ಯಮಂತ್ರಿ ಸಚಿನ್ ಪೈಲಟ್ ನಡುವಣ ತಿಕ್ಕಾಟ ತಾರಕಕ್ಕೇರಿದ್ದು, ಎರಡನೇ ಸಭೆಯಲ್ಲೂ ಭಾಗಿಯಾಗದ ಉಪಮುಖ್ಯಮಂತ್ರಿ ಸಚಿನ್ ಪೈಲಟ್ ಅವರನ್ನು ಡಿಸಿಎಂ ಸ್ಥಾನದಿಂದ ವಜಾಗೊಳಿಸಲಾಗಿದೆ ಎಂದು ತಿಳಿದು ಬಂದಿದೆ.
ಬಂಡಾಯ ನಾಯಕರ ವಿರುದ್ಧ ಶಿಸ್ತು ಕ್ರಮ ಕೈಗೊಳ್ಳುವ ಕುರಿತು ಇಂದು ಶಾಸಕಾಂಗ ಪಕ್ಷದ ಸಭೆ ನಡೆದಿದ್ದು, ಸಭೆಯಲ್ಲಿ ಈ ಕಠಿಣ ನಿರ್ಣಯವನ್ನು ಕೈಗೊಳ್ಳಲಾಗಿದೆ
ಈ ಕುರಿತು ಕಾಂಗ್ರೆಸ್ ವಕ್ತಾರ ರಂದೀಪ್ ಸಿಂಗ್ ಸುರ್ಜೆವಾಲಾ ಮಂಗಳವಾರ ಘೋಷಿಸಿದ್ದು ರೆಬೆಲ್ ಸಚಿನ್ ಪೈಲಟ್ ಅವರನ್ನು ಡಿಸಿಎಂ ಸ್ಥಾನದಿಂದ ತೆಗೆದುಹಾಕಲಾಗಿದೆ. ಜೊತೆಗೆ ಅವರನ್ನು ಪಕ್ಷದ ಅಧ್ಯಕ್ಷ ಸ್ಥಾನದಿಂದಲೂ ವಜಾಗೊಳಿಸಲಾಗಿದೆ ಎಂದು ತಿಳಿಸಿದ್ದಾರೆ.
ಸಚಿನ್ ಪೈಲಟ್ ಅವರ ಮನವೊಲಿಸಲು ಕಾಂಗ್ರೆಸ್ ಹಲವಾರು ಪ್ರಯತ್ನಗಳ ಹೊರತಾಗಿಯೂ, ಸಚಿನ್ ಮನವಿಯನ್ನು ನಿರಾಕರಿಸಿದ್ದರು.