ಬೆಂಗಳೂರು, ಜು 15 (DaijiworldNews/PY): ದ್ವಿತೀಯ ಪಿಯುಸಿ ಫಲಿತಾಂಶ ಕುಸಿಯಲು ಉಪನ್ಯಾಸಕರ ಕೊರತೆ ಕೂಡಾ ಕಾರಣ ಎನ್ನುವುದು ಸತ್ಯ. ಇದರ ಹೊಣೆಯನ್ನು ಶಿಕ್ಷಣ ಸಚಿವರೇ ವಹಿಸಬೇಕಾಗುತ್ತದೆ ಎಂದು ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಹೇಳಿದ್ದಾರೆ.
ಈ ಬಗ್ಗೆ ಟ್ವೀಟ್ ಮಾಡಿರುವ ಅವರು, ದ್ವಿತೀಯ ಪಿಯುಸಿ ಫಲಿತಾಂಶ ಕುಸಿಯಲು ಉಪನ್ಯಾಸಕರ ಕೊರತೆ ಕೂಡಾ ಕಾರಣ ಎನ್ನುವುದು ಸತ್ಯ. ಇದರ ಹೊಣೆಯನ್ನು ಪಿಯುಸಿ ಉಪನ್ಯಾಸಕರ ನೇಮಕಾತಿ ಪ್ರಕ್ರಿಯೆಯನ್ನು ಸ್ಥಗಿತಗೊಳಿಸಿರುವ ಶಿಕ್ಷಣ ಸಚಿವರೇ ವಹಿಸಬೇಕಾಗುತ್ತದೆ ಎಂದಿದ್ದಾರೆ.
ಪಿಯುಸಿ ಉಪನ್ಯಾಸಕರ ಹುದ್ದೆಗೆ 2018ರಲ್ಲಿ ಬರೆದಿದ್ದ ಪರೀಕ್ಷೆಯಲ್ಲಿ ಉತ್ತೀರ್ಣರಾದ 1298 ಅಭ್ಯರ್ಥಿಗಳ ಆಯ್ಕೆಪಟ್ಟಿ ಅಂತಿಮವಾಗಿತ್ತು. ಆದರೆ
ಶಿಕ್ಷಣ ಸಚಿವರು ಮಧ್ಯೆಪ್ರವೇಶಿಸಿ ಸ್ಥಳ ನಿಯುಕ್ತಿ ಕೌನ್ಸಿಲಿಂಗ್ ಪ್ರಕ್ರಿಯೆ ಸ್ಥಗಿತಗೊಳಿಸಿರುವುದು ಅಭ್ಯರ್ಥಿಗಳಿಗಷ್ಟೇ ಅಲ್ಲ ವಿದ್ಯಾರ್ಥಿಗಳಿಗೂ ಮಾಡಿರುವ ಅನ್ಯಾಯ ಎಂದು ತಿಳಿಸಿದ್ದಾರೆ.