ಶ್ರೀನಗರ, ಜು 17 (DaijiworldNews/PY): ಜಮ್ಮು-ಕಾಶ್ಮೀರದ ಕುಲ್ಗಾಮ್ ಜಿಲ್ಲೆಯ ನಾಗ್ನಾಡ್-ಚಿಮ್ಮರ್ ಪ್ರದೇಶ ದಲ್ಲಿ ಇಂದು ಬೆಳಿಗ್ಗೆ ಭದ್ರತಾ ಪಡೆಗಳು ನಡೆಸಿದ ಎನ್ಕೌಂಟರ್ನಲ್ಲಿ ಮೂವರು ಉಗ್ರರು ಮೃತಪಟ್ಟಿದ್ದು, ಕಾರ್ಯಾಚರಣೆಯಲ್ಲಿ ಮೂವರು ಯೋಧರಿಗೂ ಗಾಯವಾಗಿದೆ ಎಂದು ವರದಿಯಾಗಿದೆ.
ಉಗ್ರರು ಅಡಗಿರುವ ಮಾಹಿತಿಯ ಮೇರೆಗೆ ಕಾರ್ಯಾಚರಣೆ ಜಂಟಿ ಕಾರ್ಯಾಚರಣೆ ನಡೆಸಿದ ಜಮ್ಮು-ಕಾಶ್ಮೀರ ಪೊಲೀಸರು, ಭಾರತೀಯ ಸೇನಾಪಡೆ ಹಾಗೂ ಸಿಆರ್ಪಿಎಫ್ ಪಡೆಗಳು ಮೂವರು ಉಗ್ರರನ್ನು ಸದೆಬಡೆದಿದೆ.
ಕಾರ್ಯಾಚರಣೆಯ ಸಂದರ್ಭ ಉಗ್ರರು ಏಕಾಏಕಿ ಗುಂಡಿನ ದಾಳಿ ನಡೆಸಿದ್ದು, ಮೂವರೂ ಯೋಧರು ಗಾಯಗೊಂಡಿದ್ದಾರೆ ಎಂದು ತಿಳಿದುಬಂದಿದೆ.
ಹತರಾಗಿರುವ ಉಗ್ರರ ಗುರುತು ಪತ್ತೆಯಾಗಿಲ್ಲ ಎನ್ನಲಾಗಿದೆ. ಇನ್ನೂ ಹಲವಾರು ಉಗ್ರರು ಅಡಗಿರುವ ಬಗ್ಗೆ ಮಾಹಿತಿ ಇದ್ದು, ಭದ್ರತಾ ಪಡೆಗಳು ಕಾರ್ಯಾಚರಣೆ ಮುಂದುವರೆಸಿವೆ.