ಬೆಂಗಳೂರು, ಜು 17 (DaijiworldNews/PY): ಕೇಂದ್ರ ಸರ್ಕಾರದಿಂದ ರಾಜ್ಯ ಸರ್ಕಾರಕ್ಕೆ ಕೊರೊನಾ ನಿಯಂತ್ರಣಕ್ಕೆ ಮಾಡಲು ಎಲ್ಲಾ ರೀತಿಯಾದ ಅವಶ್ಯಕವಾದ ನೆರವು ಕಲ್ಪಿಸಲಾಗುವುದು ಎಂದು ಕೇಂದ್ರ ರಾಸಾಯನಿಕ ಮತ್ತು ರಸಗೊಬ್ಬರ ಖಾತೆ ಸಚಿವ ಡಿ ವಿ ಸದಾನಂದ ಗೌಡ ಹೇಳಿದರು.
ಶುಕ್ರವಾರ ಬೆಂಗಳೂರಿನಲ್ಲಿ ಸಿಎಂ ಬಿಎಸ್ವೈ ಅವವರೊಂದಿಗೆ ನಡೆದ ಸಭೆಯಲ್ಲಿ ಮಾತುಕತೆ ನಡೆಸಿ ಮಾತನಾಡಿದ ಅವರು. ಕೊರೊನಾ ನಿಯಂತ್ರಣಕ್ಕೆ ಕೇಂದ್ರದಿಂದ ರಾಜ್ಯಕ್ಕೆ ಎಲ್ಲಾ ಅಗತ್ಯವಾದ ನೆರವನ್ನು ಮಾಡುವುದಾಗಿ ತಿಳಿಸಿದರು.
ಕೇಂದ್ರ ಸರ್ಕಾರವು ರಾಜ್ಯದಲ್ಲಿ ಕೊರೊನಾ ಸೋಂಕನ್ನು ನಿಯಂತ್ರಣ ಮಾಡುವ ನಿಟ್ಟಿನಲ್ಲಿ ಎಲ್ಲಾ ಅಗತ್ಯವಾದ ಸಹಾಯ ಮಾಡಲು ಸಿದ್ದ. ಕೇಂದ್ರ ಸರ್ಕಾರದಿಂದ ರಾಜ್ಯ ಸರ್ಕಾರ ನೆರವು ಬಯಸಿದರೆ ಶೀಘ್ರವೇ ನೆರವು ಕಲ್ಪಿಸಲಾಗುವುದು ಎಂದರು.