ಬೆಂಗಳೂರು, ಜು 17(DaijiworldNews/SM): ರಾಜ್ಯದಲ್ಲಿ ದಿನದಿಂದ ದಿನಕ್ಕೆ ಕೊರೊನಾ ಪ್ರಕರಣಗಳು ಹೆಚ್ಚಾಗುತ್ತಿದ್ದು, ಸಾವಿನ ಸಂಖ್ಯೆಯೂ ಕೂಡ ಏರಿಕೆಯಾಗುತ್ತಿದೆ. ಶುಕ್ರವಾರದಂದು ಒಂದೇ ದಿನ ರಾಜ್ಯದಲ್ಲಿ 115 ಮಂದಿ ಕೊರೊನಾ ಸೋಂಕಿಗೆ ಬಲಿಯಾಗಿದ್ದಾರೆ.
ಶುಕ್ರವಾರದ ಸಾವಿನ ಮೂಲಕ ರಾಜ್ಯದಲ್ಲಿ ಸಾವಿನ ಸಂಖ್ಯೆ 1,147ಕ್ಕೆ ಏರಿಕೆಯಾಗಿದೆ. ಕೊರೋನಾ ವೈರಸ್ ನಿಂದಾಗಿ ಕಳೆದ 24 ಗಂಟೆಯೊಳಗೆ ರಾಜ್ಯದ ರಾಜಧಾನಿ ಬೆಂಗಳೂರಿನಲ್ಲೇ 75 ಸೋಂಕಿತರು ಸೋಂಕಿತರು ಸಾವನ್ನಪ್ಪಿದ್ದಾರೆ. ಇನ್ನು ಶುಕ್ರವಾರದಂದು ಬೆಂಗಳೂರು ನಗರದಲ್ಲಿ ಅತ್ಯಧಿಕ ಪ್ರಕರಣಗಳು ದೃಢಪಟ್ಟಿವೆ ಎಂದು ವರದಿಯಾಗಿದೆ.
2,208 ಪ್ರಕರಣಗಳು ಬೆಂಗಳೂರಿನಲ್ಲಿ ವರದಿಯಾಗಿದ್ದು, ರಾಜ್ಯದಲ್ಲಿ ಒಟ್ಟು 3,693 ಮಂದಿಗೆ ಪಾಸಿಟಿವ್ ದೃಢಪಟ್ಟಿದೆ ಎಂದು ವೈದ್ಯಕೀಯ ಶಿಕ್ಷಣ ಸಚಿವ ಡಾ. ಸುಧಾಕರ್ ಮಾಹಿತಿ ನೀಡಿದ್ದಾರೆ.