ತಿರುವನಂತಪುರಂ, ಜು 17(DaijiworldNews/SM): ಕೊರೊನಾ ಸೋಂಕು ಸಮುದಾಯಕ್ಕೆ ಹರಡಿದೆ ಎಂದು ಕೇರಳ ಸಿಎಂ ಪ್ರತಿಕ್ರಿಯೆ ನೀಡಿದ್ದಾರೆ. ರಾಜ್ಯದ ಕೆಲವು ಕಡೆಗಳಲ್ಲಿ ದಿನದಿಂದ ದಿನಕ್ಕೆ ಸೋಂಕು ಪ್ರಕರಣ ಹೆಚ್ಚಾಗುತ್ತಿರುವ ಹಿನ್ನೆಲೆಯಲ್ಲಿ ಅವರು ಈ ಪ್ರತಿಕ್ರಿಯೆ ನೀಡಿದ್ದಾರೆ ಎನ್ನಲಾಗಿದೆ.
ತಿರುವನಂತಪುರಂನ ಪುಲ್ಲುವಿಲಾ ಮತ್ತು ಪೂಂಟುರಾ ಎಂಬ ಗ್ರಾಮಗಳಲ್ಲಿ ಕೊರೊನಾ ವೈರಸ್ ಹೆಚ್ಚಳವಾಗುತ್ತಿದೆ. ಈ ಎರಡು ಗ್ರಾಮಗಳಲ್ಲಿ ಸೋಂಕು ಸಮುದಾಯಕ್ಕೆ ಹರಡಿದೆ ಎಂಬುವುದಾಗಿ ಸಿಎಂ ಪಿಣರಾಯಿ ವಿಜಯನ್ ಮಾಹಿತಿ ನೀಡಿದ್ದಾರೆ ಎಂದು ಮಾಧ್ಯಮಗಳು ವರದಿ ಮಾಡಿವೆ.
ಕೇರಳದಲ್ಲಿ ಇಂದು ಒಂದೇ ದಿನ 791 ಹೊಸ ಪಾಸಿಟಿವ್ ಪ್ರಕರಣಗಳು ಪತ್ತೆಯಾಗಿವೆ. ಇದರೊಂದಿಗೆ ಕೇರಳದಲ್ಲಿ ಸೋಂಕಿತರ ಸಂಖ್ಯೆ 11,066ಕ್ಕೆ ಏರಿಕೆಯಾಗಿದೆ.