ಮುಂಬೈ, ಜು 18 (Daijiworld News/MSP): ಇತ್ತೀಚೆಗಷ್ಟೇ ಕೊರೊನಾ ಸೋಂಕು ದೃಢ ಪಟ್ಟಿದ್ದ ಖ್ಯಾತ ಬಾಲಿವುಡ್ ನಟಿ ಐಶ್ವರ್ಯಾ ರೈ ಹಾಗೂ ಮಗಳು ಆರಾಧ್ಯ ಬಚ್ಚನ್ ಮುಂಬೈ ನಾನಾವತಿ ಆಸ್ಪತ್ರೆಗೆ ದಾಖಲಾಗಿದ್ದಾರೆ.
46 ವರ್ಷದ ನಟಿ ಐಶ್ವರ್ಯಾ ರೈ ಬಚ್ಚನ್ ಹಾಗೂ ಆರಾಧ್ಯ ಅವರನ್ನು ಮುಂಬೈನ ನಾನಾವತಿ ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದು ಸುದ್ದಿ ಸಂಸ್ಥೆಯೊಂದು ವರದಿ ಮಾಡಿದೆ. ಕೆಲ ದಿನಗಳ ಹಿಂದೆ ನಟಿ ಐಶ್ವರ್ಯಾ ಹಾಗೂ ಮಗಳು ಆರಾಧ್ಯ ಅವರಿಗೆ ಸೋಂಕು ದೃಢಪಟ್ಟ ಹಿನ್ನಲೆಯಲ್ಲಿ ಬಚ್ಚನ್ ನಿವಾಸ ಜಲ್ಸಾದಲ್ಲಿ ಹೋಮ್ ಕ್ವಾರಂಟೈನ್ ಆಗಿದ್ದರು. ಮುಂಬೈ ಪಾಲಿಕೆ ಇವರ ಮನೆ ಮುಂದೆ ಹೋಮ್ ಕ್ವಾರಂಟೈನ್ ಪ್ರಕಟಣೆ ಲಗತ್ತಿಸಿತ್ತು.
ಐಶ್ವರ್ಯಾ ರೈ ಬಚ್ಚನ್ ಅವರ ಮಾವ ಅಮಿತಾಬ್ ಬಚ್ಚನ್ ಮತ್ತು ಪತಿ ಅಭಿಷೇಕ್ ಅವರಲ್ಲಿ ಕೊರೊನಾ ಧೃಢಪಟ್ಟ ಹಿನ್ನಲೆಯಲ್ಲಿ ಈಗಾಗಲೇ ಅವರು ನಾನಾವತಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದು ಅವರ ಆರೋಗ್ಯ ಸ್ಥಿರವಾಗಿದೆ ಎಂದು ತಿಳಿದುಬಂದಿದೆ.