ಲಖನೌ, ಜು.18 (DaijiworldNews/MB) : ಉತ್ತರ ಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಅವರ ಕಚೇರಿ ಎದುರಲ್ಲೇ ತಾಯಿ ಹಾಗೂ ಮಗಳು ಬೆಂಕಿ ಹಾಕಿಕೊಂಡು ಆತ್ಮಹತ್ಯೆಗೆ ಯತ್ನಿಸಿದ ಘಟನೆ ಶುಕ್ರವಾರ ನಡೆದಿದ್ದು ತಡವಾಗಿ ಬೆಳಕಿಗೆ ಬಂದಿದೆ.
ಅಮೇಥಿಯಲ್ಲಿರುವ ಭೂ ವಿವಾದಕ್ಕೆ ಸಂಬಂಧಿಸಿ ಪೊಲೀಸರು ಯಾವುದೇ ಕ್ರಮಕೈಗೊಳಿಲ್ಲ ಎಂಬ ಕಾರಣಕ್ಕೆ ತಾಯಿ ಹಾಗೂ ಮಗಳು ಆತ್ಮಹತ್ಯೆಗೆ ಯತ್ನಿಸಿದ್ದಾರೆ ಎಂದು ಹೇಳಲಾಗಿದ್ದು ಗಂಭೀರವಾಗಿ ಸುಟ್ಟ ಗಾಯಗಳಾಗಿರುವ ಇಬ್ಬರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ.
ಲೋಕ ಭವನದ ವಿಧಾನಸಭೆಯು ಕೂಡಾ ಇದ್ದು ಬಿಗಿ ಭದ್ರತೆ ಇದೆ. ಈ ನಡುವೆಯೂ ತಾಯಿ ಹಾಗೂ ಮಗಳು ಮೈ ಮೇಲೆ ಇಂಧನ ಸುರಿದು ಬೆಂಕಿ ಹಚ್ಚಿ ಆತ್ಮಹತ್ಯೆಗೆ ಯತ್ನಿಸಿದ್ದು ಇದನ್ನು ನೋಡಿದ ಸಿಬ್ಬಂದಿಗಳು ತಕ್ಷಣ ಇಬ್ಬರನ್ನು ಆಸ್ಪತ್ರೆಗೆ ದಾಖಲಿಸಿದ್ದಾರೆ.