ಕೋಲಾರ, ಜು.19 (DaijiworldNews/MB) : ಸೋದರಿನಿಗೆ ಕೊರೊನಾ ಸೋಂಕು ಇರುವುದು ದೃಢವಾದ ವಿಷುಯ ತಿಳಿದಾಗ ಆತಂಕಕ್ಕೆ ಒಳಗಾದ ವ್ಯಕ್ತಿಯೋರ್ವ ನೇಣಿಗೆ ಶರಣಾದ ಘಟನೆ ಕೋಲಾರದ ಗಾಂಧಿನಗರದಲ್ಲಿ ಶನಿವಾರ ರಾತ್ರಿ ನಡೆದಿದೆ.
ಮೃತ ವ್ಯಕ್ತಿಯನ್ನು ನಾಗರಾಜ್ (37) ಎಂದು ಗುರುತಿಸಲಾಗಿದೆ.
ನಾಗರಾಜ್ ಅವರ ತಮ್ಮನಿಗೆ ಕೊರೊನಾ ಸೋಂಕು ದೃಢಪಟ್ಟಿದ್ದು ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ. ತಮ್ಮನಿಗೆ ಕೊರೊನಾ ಇರುವುದು ದೃಢಪಟ್ಟ ಹಿನ್ನಲೆ ತಮ್ಮನೊಂದಿಗೆ ಇದ್ದ ತನಗೂ ಸೋಂಕು ಬರಬಹುದು ಎಂದು ಆತಂಕಕ್ಕೆ ಒಳಗಾದ ನಾಗರಾಜ್ ಆತ್ಮಹತ್ಯೆಗೆ ಶರಣಾಗಿದ್ದಾನೆ ಎಂದು ಕುಟುಂಬಸ್ಥರು ತಿಳಿಸಿರುವುದಾಗಿ ವರದಿಯಾಗಿದೆ.
ಈ ಬಗ್ಗೆ ಗಲ್ ಪೇಟೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು ತನಿಖೆ ನಡೆಸಲಾಗುತ್ತಿದೆ.