ಬೆಂಗಳೂರು, ಜು.19 (DaijiworldNews/MB) : ಕೊರೊನಾ ರೋಗಿಗಳಿಗೆ ಹಾಸಿಗೆ ನೀಡಲು ನಿರಾಕರಿಸಿದರೆ ಖಾಸಗಿ ಆಸ್ಪತ್ರೆಗಳ ವಿರುದ್ಧ ಕಾನೂನು ಕ್ರಮ ಕೈಗೊಳ್ಳಲು ಮುಂಖ್ಯಮಂತ್ರಿ ಬಿ ಎಸ್ ಯಡಿಯೂರಪ್ಪನವರು ಸೂಚಿಸಿದ್ದಾರೆ ಎಂದು ಕಂದಾಯ ಸಚಿವ ಆರ್.ಅಶೋಕ್ ತಿಳಿಸಿದ್ದಾರೆ.
ಖಾಸಗಿ ಮೆಡಿಕಲ್ ಕಾಲೇಜು ಆಸ್ಪತ್ರೆಗಳ ಮುಖ್ಯಸ್ಥರ ಜೊತೆ ಮುಖ್ಯಮಂತ್ರಿ ಸಭೆ ಬಳಿಕ ಮಾತನಾಡಿದ ಅವರು, ಬೆಡ್ ನಿರಾಕರಿಸಿದರೆ ಕಾನೂನು ಕ್ರಮಕೈಗೊಳ್ಳುತ್ತೇವೆ ಎಂದು ಖಾಸಗಿ ಮೆಡಿಕಲ್ ಕಾಲೇಜು ಆಸ್ಪತ್ರೆಗಳಿಗೆ ಮುಖ್ಯಮಂತ್ರಿಗಳು ಖಡಕ್ ಎಚ್ಚರಿಕೆ ನೀಡಿದ್ದಾರೆ. 50% ಹಾಸಿಗೆಯನ್ನು ಬಿಟ್ಟುಕೊಡಬೇಕು. ಇನ್ನು ಮುಂದೆ ಯಾವ ಸಭೆಯನ್ನು ನಡೆಸಲ್ಲ ಎಂದು ಮುಖ್ಯಮಂತ್ರಿಗಳು ಎಚ್ಚರಿಕೆ ನೀಡಿದ್ದಾರೆ ಎಂದು ಸಚಿವ ಆರ್.ಅಶೋಕ್ ತಿಳಿಸಿದ್ದಾರೆ.
ಹಾಗೆಯೇ ಖಾಸಗಿ ವೈದ್ಯಕೀಯ ಕಾಲೇಜುಗಳು ಶೇಕಡಾ 50ರಷ್ಟು ಬೆಡ್ ನೀಡಲು ಸಿಎಂ ಸಭೆಯಲ್ಲಿ ಒಪ್ಪಿಗೆ ಸೂಚಿಸಿವೆ.