ಗುವಾಹಟಿ, ಜು 19 (DaijiworldNews/PY): ಅಸ್ಸಾಂನಲ್ಲಿ ಸಂಭವಿಸಿದ ಭೀಕರ ಪ್ರವಾಹ ಪರಿಸ್ಥಿತಿಯ ಬಗ್ಗೆ ಮಾಹಿತಿ ಪಡೆದ ಪ್ರಧಾನಿ ನರೇಂದ್ರ ಮೋದಿ ಅವರು ರಾಜ್ಯಕ್ಕೆ ಅಗತ್ಯವಾದ ನೆರವನ್ನು ನೀಡುವ ಭರವಸೆ ನೀಡಿದ್ದಾರೆ.
ಭಾನುವಾರ ಅಸ್ಸಾ ಮುಖ್ಯಮಂತ್ರಿ ಸರ್ವಾನಂದ ಸೋನವಾಲ್ ಅವರೊಂದು ವಿಡಿಯೋ ಸಂಭಾಷಣೆ ನಡೆಸಿದ ಪ್ರಧಾನಿ ಮೋದಿ ಅವರು ಪ್ರವಾಹದ ಪರಿಸ್ಥಿತಿ, ಕೊರೊನಾ ಸೇರಿದಂತೆ ತೈಲಬಾವಿ ಅಗ್ನಿ ಬಗ್ಗೆ ಮಾಹಿತಿ ಪಡೆದುಕೊಂಡಿದ್ದಾರೆ.
ಈ ಬಗ್ಗೆ ಟ್ವೀಟ್ ಮಾಡಿರುವ ಅಸ್ಸಾಂ ಸಿಎಂ, ಪ್ರಧಾನಿ ಅವರು ಜನರಿಗೆ ಧೈರ್ಯ ತುಂಬಿದ್ದಾರೆ. ಅಲ್ಲದೇ, ರಾಜ್ಯಕ್ಕೆ ಎಲ್ಲಾ ರೀತಿಯಾದ ನೆರವನ್ನು ನೀಡುವುದಾಗಿ ಭರವಸೆ ನೀಡಿದ್ದಾರೆ ಎಂದು ತಿಳಿಸಿದ್ದಾರೆ.
ಅಸ್ಸಾಂನಲ್ಲಿ ಉಂಟಾಗಿರುವ ಭೀಕರ ಪ್ರವಾಹಕ್ಕೆ ಸುಮಾರು 27 ಲಕ್ಷ ಜನರು ತೊಂದರೆಗೆ ಸಿಲುಕಿದ್ದಾರೆ. ಅಲ್ಲದೇ, 81 ಮಂದಿ ಸಾವನ್ನಪ್ಪಿದ್ದಾರೆ. ಒಟ್ಟು 487 ಪರಿಹಾರ ಕೇಂದ್ರಗಳನ್ನು ತೆರೆಯಲಾಗಿದ್ದು, 1.25 ಲಕ್ಷ ಜನರು ಆಶ್ರಯ ಪಡೆದಿದ್ದಾರೆ.