ಬೆಂಗಳೂರು, ಜು. 19 (DaijiworldNews/SM): ರಾಜ್ಯದಲ್ಲಿ ಕೊರೊನಾ ಸೋಂಕಿತರ ಸಂಖ್ಯೆ ದಿನದಿಂದ ದಿನಕ್ಕೆ ಹೆಚ್ಚಳವಾಗುತ್ತಿದ್ದು, ರವಿವಾರದಂದು ಮತ್ತೆ 4,120 ಮಂದಿಯಲ್ಲಿ ಸೋಂಕು ದೃಢಪಟ್ಟಿದೆ. ಇದರಿಂದಾಗಿ ರಾಜ್ಯದಲ್ಲಿ ಸೋಂಕಿತರ ಸಂಖ್ಯೆ 63,772ಕ್ಕೆ ಏರಿಕೆಯಾಗಿದೆ.
ಮತ್ತೊಂದೆಡೆ ಸಾವಿನ ಸಂಖ್ಯೆಯಲ್ಲೂ ಹೆಚ್ಚಳವಾಗುತ್ತಿದೆ. ರವಿವಾರದಂದು ಸೋಂಕಿನಿಂದಾಗಿ 91 ಮಂದಿ ಮೃತಪಟ್ಟಿದ್ದಾರೆ. ಇದರೊಂದಿಗೆ ರಾಜ್ಯದಲ್ಲಿ ಸೋಂಕಿನಿಂದ ಮೃತಪಟ್ಟವರ ಸಂಖ್ಯೆ 1,331ಕ್ಕೆ ತಲುಪಿದೆ ಎಂದು ವೈದ್ಯಕೀಯ ಶಿಕ್ಷಣ ಸಚಿವ ಡಾ. ಕೆ ಸುಧಾಕರ್ ಮಾಹಿತಿ ನೀಡಿದ್ದಾರೆ.
ಇನ್ನು ಪ್ರತಿನಿತ್ಯ ಬೆಂಗಳೂರಿನಲ್ಲೇ ಅತ್ಯಧಿಕ ಪ್ರಕರಣಗಳು ದೃಢಪಡುತ್ತಿದ್ದು, ರವಿವಾರವೂ ಕೂಡ ಬೆಂಗಳೂರಿನಲ್ಲೇ ಹೆಚ್ಚು ಸೋಂಕಿತರು ಪತ್ತೆಯಾಗಿದ್ದಾರೆ. ಬೆಂಗಳೂರಿನಲ್ಲೇ ಸುಮಾರು 2156 ಮಂದಿಯಲ್ಲಿ ಸೋಂಕು ದೃಢಪಟ್ಟಿದೆ. ಉಳಿದಂತೆ ದ.ಕ. ಜಿಲ್ಲೆಯಲ್ಲಿ ಮತ್ತೆ ೨೮೫ ಮಂದಿಯಲ್ಲಿ ಸೋಂಕು ದೃಢಪಟ್ಟಿದೆ.