ಬೆಂಗಳೂರು, ಜು. 20 (DaijiworldNews/SM): ರಾಜ್ಯದಲ್ಲಿ ಕೊರೊನಾ ಪ್ರಕರಣಗಳು ದಿನದಿಂದ ದಿನಕ್ಕೆ ಹೆಚ್ಚಳವಾಗಿತ್ತಿದೆ. ಸೋಮವಾರದಂದು ಮತ್ತೆ 3,648 ಮಂದಿಯಲ್ಲಿ ಸೋಂಕು ಕಾಣಿಸಿಕೊಂಡಿದೆ. ಸದ್ಯ ರಾಜ್ಯದಲ್ಲಿ ಸೋಂಕಿತರ ಸಂಖ್ಯೆ 67,420ಕ್ಕೆ ಹೆಚ್ಚಳವಾಗಿದೆ.
ಮತ್ತೆ ಸಾವಿನ ಸಂಖ್ಯೆ ಹೆಚ್ಚಳವಾಗಿದ್ದು, ಸೋಮವಾರದಂದು 72 ಮಂದಿ ಕೊರೊನಾದಿಂದಾಗಿ ಸಾವನ್ನಪ್ಪಿದ್ದಾರೆ. ಈ ಮೂಲಕ ರಾಜ್ಯದಲ್ಲಿ ಸೋಂಕಿನಿಂದ ಮೃತಪಟ್ಟವರ ಸಂಖ್ಯೆ 1,404ಕ್ಕೆ ತಲುಪಿದೆ ಎಂದು ವೈದ್ಯಕೀಯ ಶಿಕ್ಷಣ ಸಚಿವ ಡಾ. ಕೆ ಸುಧಾಕರ್ ಮಾಹಿತಿ ನೀಡಿದ್ದಾರೆ.
ಇನ್ನು ಪ್ರತಿನಿತ್ಯ ಬೆಂಗಳೂರಿನಲ್ಲೇ ಅತ್ಯಧಿಕ ಪ್ರಕರಣಗಳು ದೃಢಪಡುತ್ತಿದ್ದು, ಇಂದು ಕೂಡ ಬೆಂಗಳೂರು ನಗರದಲ್ಲೇ ಅತಿ ಹೆಚ್ಚು ಅಂದರೆ 1,452 ಪ್ರಕರಣಗಳು ವರದಿಯಾಗಿದೆ.