ನವದೆಹಲಿ, ಜು. 21 (DaijiworldNews/MB) : 1992ರಲ್ಲಿ ನಡೆದಿದ್ದ ಬಾಬ್ರಿ ಮಸೀದಿ ಧ್ವಂಸ ಪ್ರಕರಣಕ್ಕೆ ಸಂಬಂಧಿಸಿ ಎಲ್ ಕೆ ಅಡ್ವಾಣಿ ಮತ್ತು ಮುರಳಿ ಮನೋಹರ್ ಜೋಷಿ ಅವರ ವಿಚಾರಣೆಯನ್ನು ಈ ತಿಂಗಳಿನಲ್ಲೇ ನಡೆಸುವುದಾಗಿ ವಿಶೇಷ ಸಿಬಿಐ ನ್ಯಾಯಾಲಯ ಹೇಳಿದೆ.
ಅಪರಾಧ ದಂಡ ಪ್ರಕ್ರಿಯಾ ಸಂಹಿತೆ (ಸಿಆರ್ಪಿಸಿ) ಕಲಂ 313ರ ಅನುಸಾರ ಜು.23 ರಂದು ವಿಡಿಯೋ ಕಾನ್ಫರೆನ್ಸ್ ಮೂಲಕ ಕೇಂದ್ರದ ಮಾಜಿ ಸಚಿವರಾದ ಮುರಳಿ ಮನೋಹರ್ ಜೋಶಿ ಹಾಗೂ ಜು.24ರಂದು ಬಿಜೆಪಿ ಹಿರಿಯ ನಾಯಕ ಮಾಜಿ ಉಪಪ್ರಧಾನಿ ಲಾಲ್ ಕೃಷ್ಣ ಆಡ್ವಾಣಿ, ಅವರ ಹೇಳಿಕೆಯನ್ನು ದಾಖಲಿಸಿಕೊಳ್ಳುವುದಾಗಿ ಸಿಬಿಐ ವಿಶೇಷ ನ್ಯಾಯಾಲಯ ಸ್ಪಷ್ಟಪಡಿಸಿದೆ.
ಕಳೆದ ವರ್ಷ ಜುಲೈಯಲ್ಲಿ ಇನ್ನು 9 ತಿಂಗಳಲ್ಲಿ ಈ ಪ್ರಕರಣವನ್ನು ಇತ್ಯರ್ಥಗೊಳಿಸಬೇಕೆಂದು ಲಕ್ನೋ ನ್ಯಾಯಾಲಯಕ್ಕೆ ಸುಪ್ರೀಂ ಕೋರ್ಟ್ ಸೂಚನೆ ನೀಡಿತ್ತು. ಎಪ್ರಿಲ್ – ಮೇ ಅಂತ್ಯಕ್ಕೆ ಅಂತಿಮ ತೀರ್ಪು ಹೊರಬೀಳಬೇಕಿತ್ತು. ಆದರೆ ಲಾಕ್ಡೌನ್ ಕಾರಣದಿಂದ ಗಡುವನ್ನು ವಿಸ್ತರಿಸಬೇಕೆಂದು ವಿಶೇಷ ನ್ಯಾಯಾಲಯ ನ್ಯಾಯಾಧೀಶರು, ಸುಪ್ರೀಂ ಕೋರ್ಟ್ಗೆ ಮನವಿ ಸಲ್ಲಿಸಿದ್ದರು. ನ್ಯಾಯಾಲಯವ ಹೊಸ ಗಡುವನ್ನು ನೀಡಿ ವೀಡಿಯೋ ಕಾನ್ಫರೆನ್ಸ್ ತಂತ್ರಜ್ಞಾನವನ್ನು ಉಪಯೋಗಿಸಿಕೊಂಡು ವಿಚಾರಣೆ ನಡೆಸುವಂತೆ ಸೂಚಿಸಿತ್ತು.
ಇನ್ನು ಇದೇ ಪ್ರಕರಣಕ್ಕೆ ಸಂಬಂಧಿಸಿ ಶಿವಸೇನಾ ಮುಖಂಡ ಸತೀಶ್ ಪ್ರಧಾನ್ ಅವರು ವಿಚಾರಣೆ ಜುಲೈ 22ರಂದು ಸಾಧ್ಯತೆ ಇದೆ.