ಬೆಂಗಳೂರು, ಜು. 21 (DaijiworldNews/MB) : ದೇಶವನ್ನು ಉದ್ದೇಶಿಸಿ ಪ್ರಧಾನಿ ನರೇಂದ್ರ ಮೋದಿ ಭಾಷಣ ಮಾಡುವಂತೆಯೇ ಇಂದು ಸಂಜೆ 5 ಗಂಟೆಗೆ ರಾಜ್ಯದ ಜನತೆಯನ್ನುದ್ದೇಶಿಸಿ ಮುಖ್ಯಮಂತ್ರಿ ಬಿ ಎಸ್ ಯಡಿಯೂರಪ್ಪನವರು ಭಾಷಣ ಮಾಡಲಿದ್ದಾರೆ.
ಕೊರೊನಾ ಸೋಂಕು ಹರಡುವಿಕೆ ತಡೆಗಟ್ಟುವ ನಿಟ್ಟಿನಲ್ಲಿ ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ ವಿಧಿಸಲಾಗಿರುವ ಲಾಕ್ಡೌನ್ ಮುಕ್ತಾಯವಾಗಲಿದ್ದು ಈ ನಡುವೆ ರಾಜ್ಯವನ್ನು ಉದ್ದೇಶಿಸಿ ಇಂದು ಸಂಜೆ 5 ಗಂಟೆಗೆ ಫೇಸ್ಬುಕ್ ಹಾಗೂ ಯೂಟ್ಯೂಬ್ ಲೈವ್ ಮುಖಾಂತರ ಬಿಎಸ್ವೈ ಮಾತನಾಡಲಿರುವುದು ಕೂತೂಹಲಕ್ಕೆ ಕಾರಣವಾಗಿದೆ.
ರಾಜ್ಯದಲ್ಲಿ ಕೊರೊನಾ ನಿಯಂತ್ರಿಸುವ ನಿಟ್ಟಿನಲ್ಲಿ ಮಹತ್ವದ ನಿರ್ಧಾರ ಕೈಗೊಳ್ಳುವ ಸಾಧ್ಯತೆಯಿದ್ದು ಮುಂದಿನ ಮಾರ್ಗಸೂಚಿಯ ಬಗ್ಗೆ ತಿಳಿಸುವ ಸಾಧ್ಯತೆಯೂ ಇದೆ.
ಇನ್ನು ಕೊರೊನಾ ಕಿಟ್ಗಳ ವಿಷಯದಲ್ಲಿ ಅವ್ಯವಹಾರ ನಡೆದಿದೆ ಎಂಬ ಸರ್ಕಾರದ ವಿರುದ್ಧ ಪ್ರತಿ ಪಕ್ಷಗಳ ಆರೋಪದ ಬಗ್ಗೆ ಮಾತನಾಡುವ ನಿರೀಕ್ಷೆಯು ಇದೆ.