National
'ಭೂ ಸುಧಾರಣೆ ಕಾಯಿದೆ ತಿದ್ದುಪಡಿ ವಿರೋಧಿಸಿ ರೈತ ಸಂಘಟನೆಗಳ ಜೊತೆಗೂಡಿ ಹೋರಾಟಕ್ಕೆ ತೀರ್ಮಾನ' - ಸಿದ್ದರಾಮಯ್ಯ
- Wed, Jul 22 2020 06:41:23 PM
-
ಬೆಂಗಳೂರು, ಜು 22 (DaijiworldNews/PY): ರಾಜ್ಯ ಸರ್ಕಾರದ ಭೂ ಸುಧಾರಣೆ ಕಾಯಿದೆ ತಿದ್ದುಪಡಿಯನ್ನು ವಿರೋಧಿಸಿ ರೈತ ಸಂಘಟನೆಗಳ ಜೊತೆಗೂಡಿ ಹೋರಾಟ ರೂಪಿಸಲಾಗುವುದು. ಈ ಕುರಿತು ಕಾಂಗ್ರೆಸ್ ಪಕ್ಷದ ವೇದಿಕೆಯಲ್ಲಿ ಚರ್ಚಿಸಿ ಮುಂದಿನ ದಿನಗಳಲ್ಲಿ ಹೋರಾಟ ಕೈಗೆತ್ತಿಕೊಳ್ಳುತ್ತೇವೆ ಎಂದು ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ.
ಈ ಬಗ್ಗೆ ಟ್ವೀಟ್ ಮಾಡಿರುವ ಅವರು, ರಾಜ್ಯ ಸರ್ಕಾರದ ಭೂ ಸುಧಾರಣೆ ಕಾಯಿದೆ ತಿದ್ದುಪಡಿಯನ್ನು ವಿರೋಧಿಸಿ ರೈತ ಸಂಘಟನೆಗಳ ಜೊತೆಗೂಡಿ ಹೋರಾಟ ರೂಪಿಸಲಾಗುವುದು. ಈ ಕುರಿತು ಕಾಂಗ್ರೆಸ್ ಪಕ್ಷದ ವೇದಿಕೆಯಲ್ಲಿ ಚರ್ಚಿಸಿ ಮುಂದಿನ ದಿನಗಳಲ್ಲಿ ಹೋರಾಟ ಕೈಗೆತ್ತಿಕೊಳ್ಳುತ್ತೇವೆ. ರೈತರಿಗೆ ಮಾರಕವಾದ ಈ ಕಾಯಿದೆ ಜಾರಿಯಾಗಬಾರದು ಎಂದಿದ್ದಾರೆ.
ಮೊದಲು ವೈದ್ಯಕೀಯ ಉಪಕರಣ ಖರೀದಿಯಲ್ಲಿ ಆಗಿರುವ ಅವ್ಯವಹಾರದ ಕುರಿತು ಹೋರಾಟ ಕೈಗೆತ್ತಿಕೊಳ್ಳುತ್ತೇವೆ. ಬಳಿಕ ಭೂ ಸುಧಾರಣಾ ಕಾಯಿದೆಗೆ ಸಂಬಂಧಿಸಿದ ಚಳವಳಿಯನ್ನು ಗ್ರಾಮ ಮಟ್ಟದಿಂದ ಆರಂಭಿಸುತ್ತೇವೆ. ಎಪಿಎಂಸಿ ಕಾಯಿದೆ, ವಿದ್ಯುತ್ ತಿದ್ದುಪಡಿ ಕಾಯಿದೆ ಸೇರಿದಂತೆ ಕೇಂದ್ರ ಹಾಗೂ ರಾಜ್ಯ ಸರ್ಕಾರ ಜಾರಿಗೆ ತಂದಿರುವ ವಿವಿಧ ಜನವಿರೋಧಿ ತಿದ್ದುಪಡಿಗಳ ಬಗ್ಗೆಯೂ ನಾವು ಹೋರಾಟ ನಡೆಸಲಿದ್ದೇವೆ ಎಂದು ತಿಳಿಸಿದ್ದಾರೆ.
ಭೂ ವ್ಯಾಜ್ಯಕ್ಕೆ ಸಂಬಂಧಿಸಿದಂತೆ 13 ಸಾವಿರಕ್ಕೂ ಹೆಚ್ಚು ಕೇಸುಗಳು ನ್ಯಾಯಾಲಯದಲ್ಲಿದೆ. ವರದಿಯೊಂದರ ಪ್ರಕಾರ ಈ ವ್ಯಾಜ್ಯಕ್ಕೆ ಸಂಬಂಧಿಸಿದ ಜಮೀನಿನ ಒಟ್ಟು ವಿಸ್ತೀರ್ಣ ಸುಮಾರು 1.70 ಲಕ್ಷ ಎಕರೆ. ಒಂದು ಎಕರೆಗೆ ಕನಿಷ್ಠ 50 ಲಕ್ಷವಾದರೂ ಈ ಜಮೀನು ರೂ.70-80 ಸಾವಿರ ಕೋಟಿ ಬೆಲೆಬಾಳುತ್ತದೆ ಎಂದು ಹೇಳಿದ್ದಾರೆ.
ನ್ಯಾಯಾಲಯಗಳಲ್ಲಿ ಇತ್ಯರ್ಥಕ್ಕೆ ಬಾಕಿ ಇರುವ ಜಮೀನನ್ನು ಸರ್ಕಾರ ಮುಟ್ಟುಗೋಲು ಹಾಕಿಕೊಳ್ಳಬಹುದು. ಆದರೆ, ಕಾಯಿದೆಗೆ ತಿದ್ದುಪಡಿ ತಂದು ಕೇಸುಗಳನ್ನು ವಜಾ ಮಾಡಿರುವುದರಿಂದ ಕೋಟ್ಯಂತರ ರೂ. ಮೌಲ್ಯದ ಜಮೀನು ಉಳ್ಳವರ ಪಾಲಾಗುತ್ತಿದೆ ಎಂದಿದ್ದಾರೆ.
ಕೊರೊನಾ ಉಪಕರಣಗಳ ಖರೀದಿ ಸಂಬಂಧ 24 ಗಂಟೆಯಲ್ಲಿ ಮಾಹಿತಿ ನೀಡುವುದಾಗಿ ಮುಖ್ಯಮಂತ್ರಿ ಯಡಿಯೂರಪ್ಪ ಅವರು ಹೇಳಿದ್ದಾರೆ. ಮಾಹಿತಿ ಕೋರಿ ಜುಲೈ 10ರಂದು ನಾನು ಮುಖ್ಯ ಕಾರ್ಯದರ್ಶಿಯವರಿಗೆ ಪತ್ರ ಬರೆದಿದ್ದೆ. ಸಿಎಂ ಬಿಎಸ್ವೈ ಅವರ ಪ್ರಕಾರ 24 ಗಂಟೆ ಎಂದರೆ 12 ದಿನಗಳೇ? ಎಂದು ಕೇಳಿದ್ದಾರೆ.
ಕಂದಾಯ ಸಚಿವ ಅಶೋಕ್ ಅವರು ರಾಜಕಾರಣಕ್ಕೆ ಬಂದಿದ್ದು ಯಾವಾಗ ? 1974ರಲ್ಲಿ ಅವರು ರಾಜಕಾರಣದಲ್ಲಿ ಇದ್ದರೆ ? ಮಲ್ಲಿಕಾರ್ಜುನ ಖರ್ಗೆ, ವೀರಪ್ಪ ಮೊಯಿಲಿ ಅಥವಾ ಕಾಗೋಡು ತಿಮ್ಮಪ್ಪ ಅವರನ್ನು ಕೇಳಿದರೆ ಭೂ ಸುಧಾರಣೆ ಕಾಯಿದೆಯ ಬಗೆಗಿನ ಇತಿಹಾಸ ವಿವರಿಸುತ್ತಾರೆ ಎಂದು ತಿಳಿಸಿದ್ದಾರೆ.
ನಾನೂ ನೇಗಿಲ ಹಿಡಿದು ಹೊಲ ಉಳುಮೆ ಮಾಡಿದ್ದೆ, ಅದರಿಂದ ನನ್ನ ಅಂಗೈಗೆ ಗಾಯವಾಗುತ್ತಿತ್ತು. ನಾನು ಈಗಲೂ ಉಳಬಲ್ಲೆ, ಕುಂಟೆ ಕಟ್ಟಬಲ್ಲೆ. ರೈತನಾಗಿ ಈ ಎಲ್ಲವನ್ನೂ ಅಶೋಕ್ ಮಾಡಿದ್ದಾರಾ? ಇವೆಲ್ಲ ಗೊತ್ತಿದ್ದರೆ ಭೂ ಸುಧಾರಣಾ ಕಾಯ್ದೆಯಿಂದ ಆಗುವ ಅನಾಹುತಗಳ ಬಗ್ಗೆ ಅವರಿಗೆ ಗೊತ್ತಿರುತ್ತಿತ್ತು ಎಂದಿದ್ದಾರೆ.
ರಾಜ್ಯ ಸರ್ಕಾರದ ಭೂ ಸುಧಾರಣೆ ಕಾಯಿದೆ ತಿದ್ದುಪಡಿಯನ್ನು ವಿರೋಧಿಸಿ ರೈತ ಸಂಘಟನೆಗಳ ಜೊತೆಗೂಡಿ ಹೋರಾಟ ರೂಪಿಸಲಾಗುವುದು. ಈ ಕುರಿತು ಕಾಂಗ್ರೆಸ್ ಪಕ್ಷದ ವೇದಿಕೆಯಲ್ಲಿ ಚರ್ಚಿಸಿ ಮುಂದಿನ ದಿನಗಳಲ್ಲಿ ಹೋರಾಟ ಕೈಗೆತ್ತಿಕೊಳ್ಳುತ್ತೇವೆ. ರೈತರಿಗೆ ಮಾರಕವಾದ ಈ ಕಾಯಿದೆ ಜಾರಿಯಾಗಬಾರದು. 1/8#LandReforms pic.twitter.com/aHVN8r4oR8
— Siddaramaiah (@siddaramaiah) July 22, 2020ಮೊದಲು ವೈದ್ಯಕೀಯ ಉಪಕರಣ ಖರೀದಿಯಲ್ಲಿ ಆಗಿರುವ ಅವ್ಯವಹಾರದ ಕುರಿತು ಹೋರಾಟ ಕೈಗೆತ್ತಿಕೊಳ್ಳುತ್ತೇವೆ. ಬಳಿಕ ಭೂ ಸುಧಾರಣಾ ಕಾಯಿದೆಗೆ ಸಂಬಂಧಿಸಿದ ಚಳವಳಿಯನ್ನು ಗ್ರಾಮ ಮಟ್ಟದಿಂದ ಆರಂಭಿಸುತ್ತೇವೆ. 2/8#LandReforms
— Siddaramaiah (@siddaramaiah) July 22, 2020ಎಪಿಎಂಸಿ ಕಾಯಿದೆ, ವಿದ್ಯುತ್ ತಿದ್ದುಪಡಿ ಕಾಯಿದೆ ಸೇರಿದಂತೆ ಕೇಂದ್ರ ಹಾಗೂ ರಾಜ್ಯ ಸರ್ಕಾರ ಜಾರಿಗೆ ತಂದಿರುವ ವಿವಿಧ ಜನವಿರೋಧಿ ತಿದ್ದುಪಡಿಗಳ ಬಗ್ಗೆಯೂ ನಾವು ಹೋರಾಟ ನಡೆಸಲಿದ್ದೇವೆ. 3/8#LandReforms
— Siddaramaiah (@siddaramaiah) July 22, 2020ಭೂ ವ್ಯಾಜ್ಯಕ್ಕೆ ಸಂಬಂಧಿಸಿದಂತೆ 13 ಸಾವಿರಕ್ಕೂ ಹೆಚ್ಚು ಕೇಸುಗಳು ನ್ಯಾಯಾಲಯದಲ್ಲಿದೆ. ವರದಿಯೊಂದರ ಪ್ರಕಾರ ಈ ವ್ಯಾಜ್ಯಕ್ಕೆ ಸಂಬಂಧಿಸಿದ ಜಮೀನಿನ ಒಟ್ಟು ವಿಸ್ತೀರ್ಣ ಸುಮಾರು 1.70 ಲಕ್ಷ ಎಕರೆ. ಒಂದು ಎಕರೆಗೆ ಕನಿಷ್ಠ 50 ಲಕ್ಷವಾದರೂ ಈ ಜಮೀನು ರೂ.70-80 ಸಾವಿರ ಕೋಟಿ ಬೆಲೆಬಾಳುತ್ತದೆ. 4/8#LandReforms
— Siddaramaiah (@siddaramaiah) July 22, 2020ನ್ಯಾಯಾಲಯಗಳಲ್ಲಿ ಇತ್ಯರ್ಥಕ್ಕೆ ಬಾಕಿ ಇರುವ ಜಮೀನನ್ನು ಸರ್ಕಾರ ಮುಟ್ಟುಗೋಲು ಹಾಕಿಕೊಳ್ಳಬಹುದು. ಆದರೆ, ಕಾಯಿದೆಗೆ ತಿದ್ದುಪಡಿ ತಂದು ಕೇಸುಗಳನ್ನು ವಜಾ ಮಾಡಿರುವುದರಿಂದ ಕೋಟ್ಯಂತರ ರೂ. ಮೌಲ್ಯದ ಜಮೀನು ಉಳ್ಳವರ ಪಾಲಾಗುತ್ತಿದೆ. 5/8#LandReforms
— Siddaramaiah (@siddaramaiah) July 22, 2020ಕೊರೊನಾ ಉಪಕರಣಗಳ ಖರೀದಿ ಸಂಬಂಧ 24 ಗಂಟೆಯಲ್ಲಿ ಮಾಹಿತಿ ನೀಡುವುದಾಗಿ ಮುಖ್ಯಮಂತ್ರಿ ಯಡಿಯೂರಪ್ಪ ಅವರು ಹೇಳಿದ್ದಾರೆ. ಮಾಹಿತಿ ಕೋರಿ ಜುಲೈ 10ರಂದು ನಾನು ಮುಖ್ಯ ಕಾರ್ಯದರ್ಶಿಯವರಿಗೆ ಪತ್ರ ಬರೆದಿದ್ದೆ. @BSYBJP ಅವರ ಪ್ರಕಾರ 24 ಗಂಟೆ ಎಂದರೆ 12 ದಿನಗಳೇ? 6/8#COVID19
— Siddaramaiah (@siddaramaiah) July 22, 2020ಕಂದಾಯ ಸಚಿವ ಅಶೋಕ್ ಅವರು ರಾಜಕಾರಣಕ್ಕೆ ಬಂದಿದ್ದು ಯಾವಾಗ ? 1974ರಲ್ಲಿ ಅವರು ರಾಜಕಾರಣದಲ್ಲಿ ಇದ್ದರೆ ? ಮಲ್ಲಿಕಾರ್ಜುನ ಖರ್ಗೆ, ವೀರಪ್ಪ ಮೊಯಿಲಿ ಅಥವಾ ಕಾಗೋಡು ತಿಮ್ಮಪ್ಪ ಅವರನ್ನು ಕೇಳಿದರೆ ಭೂ ಸುಧಾರಣೆ ಕಾಯಿದೆಯ ಬಗೆಗಿನ ಇತಿಹಾಸ ವಿವರಿಸುತ್ತಾರೆ. 7/8#LandReforms
— Siddaramaiah (@siddaramaiah) July 22, 2020ನಾನೂ ನೇಗಿಲ ಹಿಡಿದು ಹೊಲ ಉಳುಮೆ ಮಾಡಿದ್ದೆ, ಅದರಿಂದ ನನ್ನ ಅಂಗೈಗೆ ಗಾಯವಾಗುತ್ತಿತ್ತು. ನಾನು ಈಗಲೂ ಉಳಬಲ್ಲೆ, ಕುಂಟೆ ಕಟ್ಟಬಲ್ಲೆ. ರೈತನಾಗಿ ಈ ಎಲ್ಲವನ್ನೂ ಅಶೋಕ್ ಮಾಡಿದ್ದಾರಾ? ಇವೆಲ್ಲ ಗೊತ್ತಿದ್ದರೆ ಭೂ ಸುಧಾರಣಾ ಕಾಯ್ದೆಯಿಂದ ಆಗುವ ಅನಾಹುತಗಳ ಬಗ್ಗೆ ಅವರಿಗೆ ಗೊತ್ತಿರುತ್ತಿತ್ತು. 8/8#LandReforms
— Siddaramaiah (@siddaramaiah) July 22, 2020