ಬೆಂಗಳೂರು, ಜು 23 (Daijiworld News/MSP): ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ನೇತೃತ್ವದಲ್ಲಿ ಇಂದು ಮಹತ್ವದ ಸಚಿವ ಸಂಪುಟ ಸಭೆ ನಡೆಯಲಿದ್ದು, ಹಲವು ವಿಧೇಯಕಗಳಿಗೆ ಅನುಮೋದನೆ ದೊರೆಯುವ ನಿರೀಕ್ಷೆಯಿದೆ.
ಇಂದು ನಡೆಯುವ ಸಭೆಯಲ್ಲಿ ಕೈಗಾರಿಕೆ ತಿದ್ದುಪಡಿ ಕಾಯ್ದೆ 2020ಗೆ ಸಂಪುಟದಲ್ಲಿ ಒಪ್ಪಿಗೆ ಸಿಗುವ ಸಾಧ್ಯತೆಯಿದೆ. ಇದಲ್ಲದೆ ಇತರ 6 ವಿಧೇಯಕಗಳು ಚೆರ್ಚೆಗೆ ಬರುವ ಸಾಧ್ಯತೆ ಇದೆ.
ಕೈಗಾರಿಕಾ ನೀತಿ ಮಾತ್ರವಲ್ಲದೆ, ಸಿಬ್ಬಂದಿ ಮತ್ತು ನೇಮಕ ಕುರಿತಂತೆ ಕರ್ನಾಟಕ ಭ್ರಷ್ಟಾಚಾರ ನಿಗ್ರಹ ದಳ ತಿದ್ದುಪಡಿ ವಿಧೇಯಕ, ಕರ್ನಾಟಕ ರಾಜ್ಯ ವಿಶ್ವವಿದ್ಯಾನಿಲಯ ವಿಧೇಯಕ, ಕರ್ನಾಟಕ ರಾಜ್ಯ ಸಿವಿಲ್ ಸರ್ವೀಸ್ ತಿದ್ದುಪಡಿ ವಿಧೇಯಕ, ಕರ್ನಾಟಕ ನಗರ ಯೋಜನೆ ವಿಧೇಯಕ, ಸರಕು ಮತ್ತು ಸೇವಾ ತೆರಿಗೆ ತಿದ್ದುಪಡಿ ವಿಧೇಯಕಗಳು ಚರ್ಚೆಗೆ ಬರುವ ಸಾಧ್ಯತೆ ಇದೆ.