ಚೆನ್ನೈ, ಜು. 23 (DaijiworldNews/MB) : ತಮಿಳುನಾಡು ರಾಜಭವನದಲ್ಲಿ 84 ಸಿಬ್ಬಂದಿಗಳಿಗೆ ಕೊರೊನಾ ಸೋಂಕು ಪಾಸಿಟಿವ್ ಆಗಿದ್ದು ರಾಜಭವನವನ್ನು ಸೀಲ್ಡೌನ್ ಮಾಡಲಾಗಿದೆ.
ರಾಜಭವನದ ಕೆಲವು ಸಿಬ್ಬಂದಿಗಳಿಗೆ ಕೊರೊನಾ ಲಕ್ಷಣಗಳು ಕಂಡು ಬಂದ ಕಾರಣದಿಂದಾಗಿ ಭದ್ರತಾ ಸಿಬ್ಬಂದಿ, ಅಗ್ನಿ ಶಾಮಕ ಸಿಬ್ಬಂದಿ ಸೇರಿದಂತೆ ಅಲ್ಲಿನ 147 ಸಿಬ್ಬಂದಿಗಳು ಕೊರೊನಾ ಪರೀಕ್ಷೆ ನಡೆಸಲಾಗಿತ್ತು. ಈ ಪೈಕಿ 84 ಮಂದಿಗೆ ಕೊರೊನಾ ಇರುವುದು ದೃಢಪಟ್ಟಿದೆ.
ಈಗಾಗಲೇ ರಾಜಭವನದ ಕ್ಯಾಂಪಸ್ ಅನ್ನು ಸಾನಿಟೈಸ್ ಮಾಡಲಾಗಿದ್ದು ರಾಜಭವನವನ್ನು ಸೀಲ್ಡೌನ್ ಮಾಡಲಾಗಿದೆ. ಹಾಗೆಯೇ 84 ಮಂದಿ ಸಿಬ್ಬಂದಿಗಳಿಗೆ ಕೊರೊನಾ ಸೋಂಕು ದೃಢಪಟ್ಟ ಹಿನ್ನೆಲೆಯಲ್ಲಿ ಎಲ್ಲಾ ಸಿಬ್ಬಂದಿಗಳನ್ನು ಕ್ವಾರಂಟೈನ್ಗೆ ಒಳಪಡಿಸಲಾಗಿದೆ.
ಇನ್ನು ಈ ಸೋಂಕಿತರು ಯಾರೂ ಕೂಡಾ ರಾಜ್ಯಪಾಲ ಬನ್ವರಿಲಾಲ್ ಪುರೋಹಿತ್ ಅವರ ಸಂಪರ್ಕಕ್ಕೆ ಬಂದಿಲ್ಲ ಎಂದು ಅಧಿಕಾರಿಯೊಬ್ಬರು ತಿಳಿಸಿರುವುದಾಗಿ ವರದಿಯಾಗಿದೆ.