ರಾಂಚಿ, ಜು 23 (Daijiworld News/MSP): ಕೊರೊನಾ ವೈರಸ್ ಸೋಂಕು ದಿನದಿಂದ ದಿನಕ್ಕೆ ಹೆಚ್ಚಾಗುತ್ತಿರುವ ಹಿನ್ನೆಲೆಯಲ್ಲಿ, ಸಾಂಕ್ರಮಿಕ ರೋಗದ ತಡೆಗೆ ಜಾರ್ಖಂಡ್ ಸರ್ಕಾರವು ಮಹತ್ವದ ಆದೇಶ ಹೊರಡಿಸಿದೆ.
ಲಾಕ್ ಡೌನ್ ನಿಯಮ ಉಲ್ಲಂಘಿಸಿದವರಿಗೆ ಜೈಲು ಶಿಕ್ಷೆ ಹಾಗೂ ಮಾಸ್ಕ್ ಧರಿಸದವರಿಗೆ ಭಾರೀ ಮೊತ್ತದ ದಂಡ ವಿಧಿಸುವ ಸಂಬಂಧ ಸುಗ್ರೀವಾಜ್ಞೆಯೊಂದನ್ನು ಹೊರಡಿಸಿದೆ.
ಲಸಿಕೆ ಬರುವವರೆಗೂ ಕೊರೋನಾವೈರಸ್ ವಿರುದ್ಧ ಧೈರ್ಯದಿಂದ ಹೋರಾಡಬೇಕಾದ ಅಗತ್ಯರುವ ಕಾರಣ ಜಾರ್ಖಂಡ್ ಸರ್ಕಾರವು ಸಾರ್ವಜನಿಕ ಸ್ಥಳದಲ್ಲಿ ಮಾಸ್ಕ್ ಧರಿಸದಿದ್ದರೆ 1 ಲಕ್ಷ ರೂ. ದಂಡ, ಮತ್ತು 2 ವರ್ಷ ಜೈಲು ಶಿಕ್ಷೆ ವಿಧಿಸಲು ಸುಗ್ರೀವಾಜ್ಞೆ ಹೊರಡಿಸಿದೆ.