ಬೆಂಗಳೂರು, ಜು. 23, (DaijiworldNews/SM): ರಾಜ್ಯದಲ್ಲಿ ಕೊರೊನಾ ಸೋಂಕು ದಿನದಿಂದ ದಿನಕ್ಕೆ ಹೆಚ್ಚಳವಾಗಿದ್ದು, ಗುರುವಾರದಂದು ಐದು ಸಾವಿರಕ್ಕೂ ಅಧಿಕ ಮಂದಿಯಲ್ಲಿ ಸೋಂಕು ದೃಢಪಟ್ಟಿದೆ.
ರಾಜ್ಯದಲ್ಲಿ ಗುರುವಾರ ಒಂದೇ ದಿನ ಬರೋಬ್ಬರಿ 97 ಮಂದಿ ಕೊರೊನಾದಿಂದಾಗಿ ಮೃತಪಟ್ಟಿದ್ದಾರೆ. ಇದರೊಂದಿಗೆ ರಾಜ್ಯದಲ್ಲಿ ಸೋಂಕಿನಿಂದ ಮೃತಪಟ್ಟವರ ಸಂಖ್ಯೆ 1616ಕ್ಕೆ ತಲುಪಿದೆ.
ಇನ್ನು ಗುರುವಾರದಂದು ಬೆಂಗಳೂರು ನಗರದಲ್ಲೇ ಅತೀ ಹೆಚ್ಚು ಪ್ರಕರಣಗಳು ಪತ್ತೆಯಾಗಿದೆ. ಒಂದೇ ದಿನ 2207 ಹೊಸ ಪ್ರಕರಣಗಳು ವರದಿಯಾಗಿವೆ. ಈ ಮೂಲಕ ರಾಜ್ಯದಲ್ಲಿ ಒಟ್ಟು 5030 ಮಂದಿಗೆ ಸೋಂಕು ಪತ್ತೆಯಾಗಿದೆ.
ಇಂದಿನ ಪ್ರಕರಣಗಳ ಮೂಲಕ ರಾಜ್ಯದಲ್ಲಿ ಸೋಂಕಿತರ ಸಂಖ್ಯೆ 80,863ಕ್ಕೇರಿಕೆಯಾಗಿದೆ ಎಂದು ತಿಳಿದುಬಂದಿದೆ. ಅಲ್ಲದೆ ರಾಜ್ಯದಲ್ಲಿ ಸೋಂಕಿನಿಂದ ಗುಣಮುಖರಾಗುವವರ ಸಂಖ್ಯೆಯೂ ಕೂಡ ಹೆಚ್ಚಾಗಿದೆ ಎಂದು ತಿಳಿದುಬಂದಿದೆ.