ಕೊಚ್ಚಿನ್, ಜು 24 (Daijiworld News/MSP): ಮಕ್ಕಳಿಂದ ತನ್ನ ದೇಹದ ಮೇಲೆ ಚಿತ್ರ ರಚಿಸಿಕೊಂಡ ಪ್ರಕರಣಕ್ಕೆ ಸಂಬಂಧಿಸಿದಂತೆ ಶಬರಿ ಮಲೆ ಸನ್ನಿಧಾನ ಪ್ರವೇಶಕ್ಕೆ ಪಟ್ಟು ಹಿಡಿದು ವಿವಾದ ಸೃಷ್ಟಿಸಿದ ಹೋರಾಟಗಾರ್ತಿ ರೆಹಾನಾ ಫಾತಿಮಾ ಜಾಮೀನು ಅರ್ಜಿಯನ್ನು ಕೇರಳ ಹೈ ಕೋರ್ಟ್ ತಿರಸ್ಕರಿಸಿದೆ.
ಅರೆನಗ್ನವಾಗಿ ಮಲಗಿ ಇಬ್ಬರು ಮಕ್ಕಳಿಂದ ತಮ್ಮ ದೇಹದ ಮೇಲೆ ಚಿತ್ರ ಬಿಡಿಸಿಕೊಳ್ಳುತ್ತಿರುವ ವಿಡಿಯೋವೊಂದು ಸಾಮಾಜಿಕ ಜಾಲತಾಣದಲ್ಲಿ ಹಂಚಿಕೊಂಡಿದ್ದರು. ಈ ಸಂಬಂಧ ಬಿಜೆಪಿ ಮೋರ್ಚಾ ಮುಖಂಡ ಎವಿ ಅರುಣ್ ಪ್ರಕಾಶ್, ಪತ್ತನಂತಿಟ್ಟ ಜಿಲ್ಲೆಯ ತಿರುವಲ್ಲ ಪೊಲೀಸ್ ಠಾಣೆಯಲ್ಲಿ ದೂರು ನೀಡಿದ್ದರು. ಮಾತ್ರವಲ್ಲದೆ ಕೇರಳ ಪೊಲೀಸರು ಪೋಕ್ಸೋ ಕಾಯಿದೆ ಅಡಿಯಲ್ಲಿ ಪ್ರಕರಣ ದಾಖಲಿಸಿದ್ದರು. ಇದೇ ಪ್ರಕರಣಕ್ಕೆ ಸಂಬಂಧಿಸಿದಂತೆ ತಮ್ಮನ್ನು ಬಂಧಿಸಿದಂತೆ ಕೋರ್ಟ್ ಮೊರೆ ಹೋಗಿದ್ದ ರೆಹಾನಾ ಫಾತಿಮಾ ನಿರೀಕ್ಷಣಾ ಜಾಮೀನಿಗೆ ಅರ್ಜಿ ಸಲ್ಲಿಕೆ ಮಾಡಿದ್ದರು. ಈ ಅರ್ಜಿಯ ವಿಚಾರಣೆಯನ್ನು ಇಂದು ನಡೆಸಿ ಕೇರಳ ಹೈಕೋರ್ಟ್ ಅರ್ಜಿ ವಜಾಗೊಳಿಸಿದೆ.
ಬಿಎಸ್ಎನ್ಎಲ್ ನಲ್ಲಿ ಟೆಕ್ನಿಷಿಯನ್ ಆಗಿರುವ ರೆಹನಾ ಅವರಿಂದ ಬಿಎಸ್ಎನ್ಎಲ್ ಸಂಸ್ಥೆಗೆ ತೀವ್ರ ಮುಜುಗರ ಉಂಟಾಗಿತ್ತು. ಪೊಲೀಸರು ಆಕೆಯ ಸರ್ಕಾರಿ ನಿವಾಸದ ಮೇಲೆ ರೇಡ್ ಮಾಡಿದ್ದರಿಂದ ಹಾಗೂ ನಿಮ್ಮ ಮೇಲಿನ ಆರೋಪಗಳಿಂದ ಬಿಎಸ್ಎನ್ಎಲ್ ವಿಶ್ವಾಸಾರ್ಹತೆಗೆ ಕುಂದು ಉಂಟಾಗಿದೆ. ಮುಂದಿನ 30 ದಿನಗಳಲ್ಲಿ ಕೊಚ್ಚಿಯಲ್ಲಿನ ಸರ್ಕಾರಿ ನಿವಾಸ ಖಾಲಿ ಮಾಡುವಂತೆ ನೋಟಿಸ್ ನೀಡಿತ್ತು.