ಬೆಂಗಳೂರು, ಜು. (DaijiworldNews/SM): ರಾಜ್ಯದಲ್ಲಿ ಮತ್ತೊಮ್ಮೆ ಒಂದೇ ದಿನ ಐದು ಸಾವಿರ ಸೋಂಕಿತರು ಪತ್ತೆಯಾಗಿದ್ದಾರೆ. ಶುಕ್ರವಾರದಂದು ರಾಜ್ಯದಲ್ಲಿ 5007 ಮಂದಿಯಲ್ಲಿ ಸೋಂಕು ಪತ್ತೆಯಾಗಿದೆ. ಆ ಮೂಲಕ ಒಟ್ಟು ಸೋಂಕಿತರ ಸಂಖ್ಯೆ 85 ಸಾವಿರ ತಲುಪಿದೆ.
ಶುಕ್ರವಾರ 110 ಮಂದಿ ಸೋಂಕಿನಿಂದಾಗಿ ಸಾವನ್ನಪ್ಪಿದ್ದಾರೆ. ಆ ಮೂಲಕ ರಾಜ್ಯದಲ್ಲಿ ಒಟ್ಟು 1732 ಮಂದಿ ಸೋಂಕಿಗೆ ಬಲಿಯಾಗಿದ್ದಾರೆ. ಈ ನಡುವೆ ರಾಜ್ಯದಲ್ಲಿ ಒಟ್ಟು ಸೋಂಕಿತರ ಸಂಖ್ಯೆ 85,870ಕ್ಕೇರಿಕೆಯಾಗಿದೆ.
ಇನ್ನು ಶುಕ್ರವಾರದಂದು 2037 ಮಂದಿ ಗುಣಮುಖರಾಗಿದ್ದು, ಒಟ್ಟು ಗುಣಮುಖರಾದವರ ಸಂಖ್ಯೆ 31347ಕ್ಕೇರಿದಂತಾಗಿದೆ.