ನವದೆಹಲಿ, ಜು. 25 (DaijiworldNews/MB) : ಅಯೋಧ್ಯೆಯಲ್ಲಿ ರಾಮ ಮಂದಿರ ನಿರ್ಮಾಣದ ಭೂಮಿ ಪೂಜೆಯನ್ನು ಬೆಳಕಿನ ಹಬ್ಬ ದೀಪಾವಳಿಯಂತೆ ನಡೆಸುವ ಚಿಂತನೆಯನ್ನು ನಡೆಸಲಾಗಿದೆ ಎಂದು ಸುದ್ದಿ ಸಂಸ್ಥೆಯೊಂದು ವರದಿ ಮಾಡಿದೆ.
ಸುಮಾರು 161 ಅಡಿ ಎತ್ತರದ ಬೃಹತ್ ರಾಮ ಮಂದಿರ ನಿರ್ಮಾಣದ ಭೂಮಿ ಪೂಜೆಯಲ್ಲಿ ಪ್ರಧಾನಿ ನರೇಂದ್ರ ಮೋದಿ ಸೇರಿದಂತೆ ಹಲವು ಗಣ್ಯರು ಭಾಗಿಯಾಗಲಿದ್ದಾರೆ. ರಾಮ 14 ವರ್ಷಗಳ ವನವಾಸ ಕಳೆದು ಅಯೋಧ್ಯೆಗೆ ವಾಪಾಸ್ ಬಂದ ದಿನದ ಸಂಭ್ರಮದಂತೆ ಅಯೋಧ್ಯೆಯ ಎಲ್ಲಾ ದೇವಾಲಯಗಳು ಮತ್ತು ಮನೆಗಳಲ್ಲಿ ದೀಪ ಹಾಗೂ ಮೇಣದ ಬತ್ತಿಗಳಿಂದ ಬೆಳಗಿಸಲು ಚಿಂತನೆ ನಡೆಸಲಾಗಿದೆ.
ಈ ನಡುವೆ ಉತ್ತರ ಪ್ರದೇಶದ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಅಯೋಧ್ಯೆಯಲ್ಲಿ 'ಭೂಮಿ ಪೂಜೆಗೆ' ನಡೆದಿರುವ ಸಿದ್ಧತೆಗಳ ಬಗ್ಗೆ ಇಂದು ಪರಿಶೀಲನೆ ನಡೆಸಿದ್ದಾರೆ.
ಇನ್ನು ಕೊರೊನಾ ಸಾಂಕ್ರಮಿಕತ ಮುಂಜಾಗೃತಾ ಕ್ರಮವಾಗಿ ಈಗಾಗಲೇ ಸುಮಾರು 200 ಮಂದಿಗೆ ಮಾತ್ರ ಭೂಮಿ ಪೂಜೆ ಕಾರ್ಯಕ್ರಮಕ್ಕೆ ಆಹ್ವಾನ ನೀಡಲಾಗಿದೆ.