ಬೆಂಗಳೂರು, ಜು 26 (DaijiworldNews/PY): ಜು 27ರ ಸೋಮವಾರದಂದು ಕಾಂಗ್ರೆಸ್, ರಾಜಸ್ಥಾನದ ರಾಜಕೀಯ ಬಿಕ್ಕಟ್ಟಿನ ಹಿನ್ನೆಲೆ ಕೇಂದ್ರ ಸರ್ಕಾರದ ವಿರುದ್ದ ದೇಶವ್ಯಾಪ್ತಿ ಪ್ರತಿಭಟನೆ ಹಮ್ಮಿಕೊಂಡಿದೆ.
ಸೋಮವಾರದಂದು ರಾಜಭವನದ ಎದುರು ಪ್ರಜಾಪ್ರಭುತ್ವ ಉಳಿಸಿ ಎನ್ನುವ ಹೆಸರಿನಲ್ಲಿ ಕಾಂಗ್ರೆಸ್ ಮುಖಂಡರು ಸೇರಿದಂತೆ ಕಾರ್ಯಕರ್ತರು ಪ್ರತಿಭಟನೆ ನಡೆಸಲಿದ್ದಾರೆ. ಇನ್ನು ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ನೇತೃತ್ವದಲ್ಲಿ ಕಾಂಗ್ರೆಸ್ ಪಕ್ಷ ಕೇಂದ್ರ ಸರ್ಕಾರದ ವಿರುದ್ದ ಪ್ರತಿಭಟನೆ ಹಮ್ಮಿಕೊಂಡಿದೆ.
ಕೇಂದ್ರ ಸರ್ಕಾರದ ನಡೆಯು ಸಂವಿಧಾನ ಹಾಗೂ ಪ್ರಜಾಪ್ರಭುತ್ವದ ವಿರುದ್ದವಾಗಿದೆ ಎಂದು ಆರೋಪಿಸಿರುವ ಕಾಂಗ್ರೆಸ್ ಈ ನಿಟ್ಟಿನಲ್ಲಿ ಪ್ರತಿಭಟನೆ ನಡೆಸಲಿದೆ.
ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ, ಕಾಂಗ್ರೆಸ್ ಪಕ್ಷದ ಹಿರಿಯ ಮುಖಂಡರು ಸೇರಿದಂತೆ ಶಾಸಕರು, ಸಂಸದರು ಪ್ರತಿಭಟನೆಯಲ್ಲಿ ಪಾಲ್ಗೊಳ್ಳಲಿದ್ದಾರೆ ಎಂಬುದಾಗಿ ಕಾಂಗ್ರೆಸ್ ಹೇಳಿದೆ.