ಬೆಂಗಳೂರು, ಜು 26 (Daijiworld News/MSP): ಐಸಿಸ್ ಹಾಗೂ ಇತರ ಸಂಘಟನೆಗಳ ಉಗ್ರರ ಚಟುವಟಿಕೆಗಳನ್ನು ಮಟ್ಟಹಾಕಲು ನಾವೂ ಪಣತೊಟ್ಟಿದ್ದು ಇದಕ್ಕಾಗಿ ರಾಷ್ಟ್ರೀಯ ತನಿಖಾ ದಳದೊಂದಿಗೆ ನಿರಂತರ ಸಂಪರ್ಕದಲ್ಲಿದ್ದೇವೆ ಎಂದು ಗೃಹ ಸಚಿವ ಬಸವರಾಜ ಬೊಮ್ಮಾಯಿ ಹೇಳಿದ್ದಾರೆ.
ರ್ನಾಟಕ ಮತ್ತು ಕೇರಳದಲ್ಲಿ ಗಮನಾರ್ಹ ಸಂಖ್ಯೆಯಲ್ಲಿ ಐಸಿಸ್ ಭಯೋತ್ಪಾದಕರು ನೆಲೆ ಕಂಡುಕೊಂಡಿದ್ದಾರೆ. ಸುಮಾರು 150ರಿಂದ 200 ಅಲ್ ಖೈದಾ, ಐಸಿಸ್ ಭಯೋತ್ಪಾದಕರು ದಾಳಿ ನಡೆಸಲು ಸೂಕ್ತ ಸಮಯಕ್ಕಾಗಿ ಹೊಂಚು ಹಾಕುತ್ತಿದ್ದಾರೆ ಎಂಬ ವಿಶ್ವಸಂಸ್ಥೆಯ ಎಚ್ಚರಿಕೆ ಹಿನ್ನಲೆಯಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯಿಸಿ ಮಾತನಾಡಿದ ಅವರು, ರಾಜ್ಯ ಸರ್ಕಾರವೂ ರಾಷ್ಟ್ರೀಯ ತನಿಖಾ ದಳದೊಂದಿಗೆ ಸಂಬಂಧಿಸಿದ ಎಲ್ಲಾ ಮಾಹಿತಿಗಳನ್ನು ವಿನಿಮಯ ಮಾಡಿಕೊಳ್ಳುತ್ತಿದೆ ಎಂದು ತಿಳಿಸಿದ್ದಾರೆ.
ರ ಚಟುವಟಿಕೆ ತಡೆಗೆ ಎಲ್ಲಾ ರೀತಿಯ ಕ್ರಮಗಳನ್ನು ಕರ್ನಾಟಕ ಪೊಲೀಸರು ತೆಗೆದುಕೊಂಡಿದೆ . ಇದಕ್ಕಾಗಿ ನಾವು ಎನ್ಐಎಯೊಂದಿಗೆ ಕಾರ್ಯ ನಿರ್ವಹಿಸುತ್ತಿದ್ದೇವೆ. ಎಲ್ಲಾ ರೀತಿಯ ಮುನ್ನೆಚ್ಚರಿಕೆಗಳನ್ನು ತೆಗೆದುಕೊಳ್ಳಲಾಗುತ್ತಿದೆ ಎಂದು ಹೇಳಿದ್ದಾರೆ.