ಬೆಂಗಳೂರು, ಜು. 26 (DaijiworldNews/SM): ರಾಜ್ಯದಲ್ಲಿ ಕೊರೊನಾ ಸೋಂಕು ದಿನದಿಂದ ದಿನಕ್ಕೆ ಹೆಚ್ಚಳವಾಗಿದೆ. ಕಳೆದ ನಾಲ್ಕು ದಿನಗಳಿಂದ ಐದು ಸಾವಿರಕ್ಕೂ ಅಧಿಕ ಪಾಸಿಟಿವ್ ಪ್ರಕರಣಗಳು ದೃಢಪಡುತ್ತಿವೆ. ಇದರಿಂದ ರಾಜ್ಯದಲ್ಲಿ ಸೋಂಕಿತರ ಸಂಖ್ಯೆ ಬರೋಬ್ಬರಿ 96 ಸಾವಿರದ ಗಡಿ ತಲುಪಿದೆ.
ರವಿವಾರದಂದು ರಾಜ್ಯದಲ್ಲಿ ಒಟ್ಟು 5199 ಪ್ರಕರಣಗಳು ವರದಿಯಾಗಿವೆ. ಇದರಿಂದ ಒಟ್ಟು ಸೋಂಕಿತರ ಸಂಖ್ಯೆ 96,141ಕ್ಕೆ ಏರಿಕೆಯಾಗಿದೆ. ಇನ್ನು 82 ಮಂದಿ ರವಿವಾರ ಸೋಂಕಿಗೆ ಬಲಿಯಾಗಿದ್ದಾರೆ. ಆ ಮೂಲಕ ರಾಜ್ಯದಲ್ಲಿ ಒಟ್ಟು 1878 ಮಂದಿ ಸೋಂಕಿಗೆ ಬಲಿಯಾದಂತಾಗಿದೆ.
ಈ ನಡುವೆ 35838 ಮಂದಿ ಇಲ್ಲಿಯ ತನಕ ಕೊರೊನಾದಿಂದ ಗುಣಮುಖರಾಗಿದ್ದಾರೆ. ಪ್ರಸ್ತುತ ರಾಜ್ಯದಲ್ಲಿ 58417 ಮಂದಿ ಆಸ್ಪತ್ರೆಗಳಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಇದರಲ್ಲಿ 632 ಮಂದಿ ಐಸಿಯುನಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.