ಬೆಂಗಳೂರು, ಜು 27 (DaijiworldNews/PY): ಕೈ ನಾಯಕರು ಕೆಪಿಸಿಸಿ ಕಚೇರಿಯಲ್ಲಿ ಸಭೆ ಸೇರಿದ್ದು, ಹಲವು ವಿಷಯಗಳ ಬಗ್ಗೆ ಚರ್ಚೆ ನಡೆಸಿದ್ದಾರೆ ಎನ್ನಲಾಗಿದೆ.
ಈ ಬಗ್ಗೆ ಟ್ವೀಟ್ ಮಾಡಿರುವ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಅವರು, ಕೆಪಿಸಿಸಿ ಕಚೇರಿಯಲ್ಲಿ ಇಂದು ನಡೆದ ಪಕ್ಷದ ಹಿರಿಯ ಮುಖಂಡರ ಸಭೆಯಲ್ಲಿ ಭಾಗವಹಿಸಿದೆ. ಸಭೆಯಲ್ಲಿ ಕೆಪಿಸಿಸಿ ಅಧ್ಯಕ್ಷರಾದ ಡಿ.ಕೆ.ಶಿವಕುಮಾರ್, ಎಐಸಿಸಿ ಪ್ರಧಾನ ಕಾರ್ಯದರ್ಶಿ ಮಲ್ಲಿಕಾರ್ಜುನ ಖರ್ಗೆ, ಮಾಜಿ ಕೇಂದ್ರ ಸಚಿವ ಕೆ.ಎಚ್. ಮುನಿಯಪ್ಪ, ಕೆಪಿಸಿಸಿ ಕಾರ್ಯಾಧ್ಯಕ್ಷರಾದ ಈಶ್ವರ್ ಖಂಡ್ರೆ, ಸಲೀಂ ಅಹ್ಮದ್, ರಮೇಶ್ ಕುಮಾರ್ ಸೇರಿದಂತೆ ಮತ್ತಿತರರು ಭಾಗವಹಿಸಿದ್ದರು ಎಂದು ಉಲ್ಲೇಖಿಸಿದ್ದಾರೆ.
ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರು ರಾಜ್ಯ ಸರ್ಕಾರ ಒಂದು ವರ್ಷ ಪೂರೈಸಿರುವ ನಿಟ್ಟಿನಲ್ಲಿ ಕಾರ್ಯಕ್ರಮ ಆಯೋಜಿಸಿದ್ದಾರೆ. ಇದರ ನಡುವೆಯೇ ಕಾಂಗ್ರೆಸ್ ನಾಯಕರು ಸಭೆ ಸೇರಿದ್ದು, ಕುತೂಹಲಕ್ಕೆರಳಿಸಿದೆ.