ಬೆಂಗಳೂರು, ಜು 27 (DaijiworldNews/PY): ಕೊರೊನಾ ನಿಯಮಗಳನ್ನು ಗಾಳಿಗೆ ತೂರಿ, ಸಾಮಾಜಿಕ ಅಂತರವನ್ನು ಮರೆತು ಕಾಂಗ್ರೆಸ್ ಮುಖಂಡರು ಜಾತ್ರೆಯಂತೆ ರಾಜ್ಯಪಾಲರಿಗೆ ದೂರು ನೀಡಲು ಹೋಗಿರುವುದು ಅವರ ಸಾಮಾಜಿಕ ಕಳಕಳಿಯನ್ನು ಎತ್ತಿ ತೋರಿಸುತ್ತದೆ ಎಂದು ವೈದ್ಯಕೀಯ ಶಿಕ್ಷಣ ಸಚಿವ ಡಾ.ಸುಧಾಕರ್ ಹೇಳಿದ್ದಾರೆ.
ಈ ಬಗ್ಗೆ ಟ್ವೀಟ್ ಮಾಡಿರುವ ಅವರು, ಕೋವಿಡ್ ನಿಯಮಗಳನ್ನು ಗಾಳಿಗೆ ತೂರಿ,ಸಾಮಾಜಿಕ ಅಂತರವನ್ನು ಮರೆತು ಕಾಂಗ್ರೆಸ್ ಮುಖಂಡರು ಜಾತ್ರೆಯಂತೆ ರಾಜ್ಯಪಾಲರಿಗೆ ದೂರು ನೀಡಲು ಹೋಗಿರುವುದು ಅವರ ಸಾಮಾಜಿಕ ಕಳಕಳಿಯನ್ನು ಎತ್ತಿ ತೋರಿಸುತ್ತದೆ. ಇವರಿಗೆ ಸಾಮಾಜಿಕ ಕಳಕಳಿಗಿಂತ ಪ್ರಚಾರದ ಗೀಳು ಜಾಸ್ತಿ. 'ತಾವು ಇರುವ ಕತ್ತಲೆಯನ್ನು ಅರಿಯದವರು, ಬೆಳಕಿಗಾಗಿ ಎಂದೂ ಹುಡುಕುವುದಿಲ್ಲ' ಎಂದಿದ್ದಾರೆ.
ರಾಜ್ಯ ಸರ್ಕಾರವು ಕೊರೊನಾ ಹೆಸರಿನಲ್ಲಿ ಅಕ್ರಮವೆಸಗಿದೆ ಎಂದು ಕಾಂಗ್ರೆಸ್ ಮುಖಂಡರು, ಈ ವಿಚಾರವಾಗಿ ತಮ್ಮ ಪ್ರಶ್ನೆಗೆ ಉತ್ತರ ನೀಡದ ಕಾರಣ ರಾಜ್ಯ ಪಾಲರಿಗೆ ದೂರು ನೀಡುತ್ತೇವೆ ಎಂದಿದ್ದರು.