ಬೆಂಗಳೂರು, ಜು 27(DaijiworldNews/SM): ರಾಜ್ಯದಲ್ಲಿ ಕೊರೊನಾ ಸೋಂಕು ದಿನದಿಂದ ದಿನಕ್ಕೆ ಹೆಚ್ಚಳವಾಗುತ್ತಿದ್ದು, ಸೋಮವಾರದಂದು ಸೋಂಕಿತರ ಸಂಖ್ಯೆ ಒಂದು ಲಕ್ಷದ ಗಡಿ ದಾಟಿದೆ.
ಕಳೆದ ಐದು ದಿನಗಳಿಂದ ನಿರಂತರವಾಗಿ ಐದು ಸಾವಿರಕ್ಕೂ ಅಧಿಕ ಪ್ರಕರಣಗಳು ಪ್ರತಿನಿತ್ಯ ದೃಢಪಡುತ್ತಿದೆ. ಸೋಮವಾರ ರಾಜ್ಯದಲ್ಲಿ 5324 ಮಂದಿಯಲ್ಲ್ಲಿಸೋಂಕು ಪತ್ತೆಯಾಗಿದೆ. ಇದರಿಂದಾಗಿ ಸೋಂಕಿತರ ಸಂಖ್ಯೆ 1,01,465ಕ್ಕೆ ಏರಿಕೆಯಾಗಿದೆ. ಸೋಮವಾರದಂದು ರಾಜ್ಯದಲ್ಲಿ 75 ಮಂದಿ ಸೋಂಕಿಗೆ ಬಲಿಯಾಗಿದ್ದಾರೆ. ಇದರಿಂದಾಗಿ ರಾಜ್ಯದಲ್ಲಿ ಮೃತಪಟ್ಟ ಸೋಂಕಿತರ ಸಂಖ್ಯೆ 1953ಕ್ಕೆ ತಲುಪಿದೆ.
ಇನ್ನು ಸೋಮವಾರದಂದು ಬೆಂಗಳೂರಿನಲ್ಲಿ 1470 ಪ್ರಕರಣಗಳು ಪತ್ತೆಯಾಗಿವೆ. ಅಲ್ಲದೆ, 26 ಮಂದಿ ಸೋಂಕಿನಿಂದಾಗಿ ಸಾವನ್ನಪ್ಪಿದ್ದಾರೆ ಎಂದು ಆರೋಗ್ಯ ಇಲಾಖೆ ವರದಿ ಮಾಡಿದೆ.