ಬೆಂಗಳೂರು, ಜು. 28 (DaijiworldNews/MB) : ಖ್ಯಾತ ನಟಿ ಸುಧಾರಾಣಿ ಅವರ ಅಣ್ಣನ ಮಗಳಿಗೆ ಆಸ್ಪತ್ರೆಯಲ್ಲಿ ಬೆಡ್ ಸಿಗದೇ ಪರದಾಟ ನಡೆಸಿ ಸುಮಾರು ಒಂದು ಗಂಟೆಗಳ ಕಾಲ ಆಸ್ಪತ್ರೆಯ ಹೊರಗೆಯೇ ಕಾದ ಘಟನೆ ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ ನಡೆದಿದ್ದು ನಟಿ ಸುಧಾರಾಣಿ ಮಾತ್ರವಲ್ಲ ಯಾರೇ ಸಾಮಾನ್ಯ ವ್ಯಕ್ತಿಯಾದರೂ ಚಿಕಿತ್ಸೆ ಸಿಗದೇ ಪರದಾಡಬಾರದು, ಅವರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಲಾಗುವುದು ಎಂದು ವೈದ್ಯಕೀಯ ಶಿಕ್ಷಣ ಸಚಿವ ಡಾ. ಕೆ ಸುಧಾಕರ್ ಅವರು ಹೇಳಿದ್ದಾರೆ.
ಈ ಈ ಬಗ್ಗೆ ಟ್ವೀಟ್ ಮಾಡಿರುವ ಅವರು, ನಟಿ ಸುಧಾರಾಣಿ ಅರೋಗ್ಯ ಸಮಸ್ಯೆಯಿಂದ ಶೇಷಾದ್ರಿಪುರಂ ಅಪೋಲೋ ಆಸ್ಪತ್ರೆಗೆ ಬಂದರೂ ಚಿಕಿತ್ಸೆಗೆ ತಡಮಾಡಿದ್ದಾರೆ ಎಂಬ ಸುದ್ದಿ ಮಾಧ್ಯಮಗಳಲ್ಲಿ ನೋಡಿದೆ. ಅವರಷ್ಟೇ ಅಲ್ಲ ಸಾಮಾನ್ಯ ವ್ಯಕ್ತಿ ಯಾರೇ ಆಗಲಿ ಚಿಕಿತ್ಸೆ ಸಿಗದೇ ಪರದಾಡಬಾರದು. ಆ ಖಾಸಗಿ ಆಸ್ಪತ್ರೆಯ ವಿರುದ್ಧ ಶಿಸ್ತು ಕ್ರಮವಹಿಸಲಾಗುವುದು ಎಂದು ತಿಳಿಸಿದ್ದಾರೆ.
ಸೋಮವರ ತಡರಾತ್ರಿಯಲ್ಲಿ ನಟಿ ಸುಧಾರಾಣಿ ಅವರ ಅಣ್ಣನ ಪುತ್ರಿಗೆ ಕಿಡ್ನಿ ಸ್ಟೋನ್ ಸಮಸ್ಯೆಯಿಂದಾಗಿ ತಲೆ ಸುತ್ತು ಬಂದಿದ್ದು ನಟಿ ಸುಧಾರಾಣಿ ಅವರು ಆಕೆಯನ್ನು ಶೇಷಾದ್ರಿಪುರಂ ಅಪೋಲೋ ಆಸ್ಪತ್ರೆಗೆ ಆಂಬುಲೆನ್ಸ್ ಮೂಲಕ ಕರೆದುಕೊಂಡು ಬಂದಿದ್ದಾರೆ. ಈ ಸಂದರ್ಭದಲ್ಲಿ ಆಸ್ಪತ್ರೆಯವರು ಬೆಡ್, ವೆಂಟಿಲೇಟರ್ ಇಲ್ಲ ಎಂದು ಹೇಳಿಕೊಂಡು ಚಿಕಿತ್ಸೆ ನೀಡಲು ನಿರಾಕರಿಸಿದ್ದು ಸುಮಾರು ಒಂದು ಗಂಟೆ ಗೇಟ್ನಿಂದ ಹೊರ ನಿಲ್ಲಿಸಿ ಕಾಯಿಸಿದ್ದಾರೆ. ಬಳಿಕ ಪೊಲೀಸ್ ಆಯುಕ್ತ ಭಾಸ್ಕರ್ ರಾವ್ ಅವರಿಗೆ ಕರೆ ಮಾಡಿ ವಿಷಯ ತಿಳಿಸಿದ್ದಾರೆ. ಬಳಿಕ ಆಸ್ಪತ್ರೆಗೆ ದಾಖಲೆ ಪಡೆದಿದ್ದಾರೆ.
ಕಳೆದ ಹಲವು ವರ್ಷಗಳಿಂದ ಸುಧಾರಾಣಿ ಅವರು ಅಪೋಲೋ ಆಸ್ಪತ್ರೆಯಲ್ಲೇ ಚಿಕಿತ್ಸೆ ಪಡೆಯುತ್ತಿದ್ದರು. ಈಗ ಒಂದು ಗಂಟೆ ಕಾಯಿಸಿದ ಕಾರಣ ನಟಿ ಗರಂ ಆಗಿದ್ದು ನಾವು ವೈದ್ಯರು ದೇವರಿಗೆ ಸಮಾನ ಎಂದು ಹೇಳುತ್ತೇವೆ. ಆದರೆ ಇಲ್ಲಿನ ಸ್ಥಿತಿಯೇ ಬೇರೆ ಇದೆ. ನಮ್ಮನ್ನು ರಾತ್ರಿ ಒಂದು ಗಂಟೆಗಳ ಕಾಲ ಹೊರಗೆ ನಿಲ್ಲಿಸಿ ಕಾಯಿಸಿದ್ದಾರೆ. ಕಮಿಷನರ್ಗೆ ಫೋನ್ ಮಾಡಿದ ಬಳಿಕ ಒಳಗೆ ಸೇರಿಸಿಸಿಕೊಂಡಿದ್ದಾರೆ ಎಂದು ಹೇಳಿದ್ದಾರೆ.