ಬೆಂಗಳೂರು, ಜು. 29 (DaijiworldNews/MB) : ಜುಲೈ 29 ಮತ್ತು 30ರಂದು ರಾಜ್ಯದ ಕರಾವಳಿ ಹಾಗೂ ಒಳನಾಡಿನಲ್ಲಿ ಭಾರಿ ಮಳೆಯಾಗುವ ಸಾಧ್ಯತೆಯಿದ್ದು ದಕ್ಷಿಣ ಕನ್ನಡ, ಉಡುಪಿ ಜಿಲ್ಲೆ ಸೇರಿದಂತೆ 23 ಜಿಲ್ಲೆಗಳಲ್ಲಿ ಎಲ್ಲೋ ಅಲರ್ಟ್ ಘೋಷಣೆ ಮಾಡಲಾಗಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.
ದಕ್ಷಿಣ ಕನ್ನಡ, ಉಡುಪಿ, ಚಿಕ್ಕಮಗಳೂರು, ಉತ್ತರ ಕನ್ನಡ, ತುಮಕೂರು, ಶಿವಮೊಗ್ಗ, ರಾಮನಗರ, ಮೈಸೂರು, ಮಂಡ್ಯ, ಕೋಲಾರ, ಕೊಡಗು, ಹಾಸನ, ದಾವಣಗೆರೆ, ಚಿತ್ರದುರ್ಗ, ಚಿಕ್ಕಬಳ್ಳಾಪುರ, ಚಾಮರಾಜನಗರ, ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ಬಳ್ಳಾರಿ, ಕಲಬುರ್ಗಿ, ಗದಗ, ಧಾರವಾಡ, ಬೀದರ್ನಲ್ಲಿ ಬುಧವಾರ ಎಲ್ಲೋ ಅಲ್ಲರ್ಟ್ ಘೋಷಿಸಲಾಗಿದೆ.
ಇನ್ನು ಕರಾವಳಿ ಗಾಳಿಯ ರಭಸ ಹೆಚ್ಚಾಗಿರುವ ಕಾರಣದಿಂದಾಗಿ ಮೀನುಗಾರರು ಎರಡು ದಿನಗಳ ಕಾಲ ಕಡಲಿಗೆ ಇಳಿಯಬಾರದು ಎಂದು ಇಲಾಖೆ ಎಚ್ಚರಿಕೆ ನೀಡಿದೆ.