ರಜೌರಿ, ಜು. 29 (DaijiworldNews/MB) : ಕಳೆದ ತಿಂಗಳಿನಿಂದ ನಿರಂತರವಾಗಿ ಉಗ್ರರನ್ನು ಸದೆಬಡಿಯುತ್ತಿರುವ ಭದ್ರತಾ ಪಡೆ ಗಡಿಯ ಮೂಲಕ ನುಸುಳಲು ಯತ್ನ ನಡೆಸುತ್ತಿದ್ದ ಇಬ್ಬರು ಉಗ್ರರನ್ನು ಹೊಡೆದುರುಳಿಸಿದೆ.
ಇಬ್ಬರು ಉಗ್ರರು ಜಮ್ಮು ಮತ್ತು ಕಾಶ್ಮೀರದ ರಜೌರಿ ಜಿಲ್ಲೆಯಲ್ಲಿ ನೌಶೆರಾ ಸೆಕ್ಟರ್ ಬಳಿಯಿರುವ ಗಡಿ ನಿಯಂತ್ರಣ ರೇಖೆಯ ಮೂಲಕ ನಾಲ್ವರು ಉಗ್ರರು ಭಾರತಕ್ಕೆ ನುಸುಳುವ ಯತ್ನ ಮಾಡಿದ್ದು ಈ ಸಂದರ್ಭದಲ್ಲಿ ಗಸ್ತಿನಲ್ಲಿದ್ದ ಸೇನಾಪಡೆ ಈ ನಾಲ್ವರ ಪೈಕಿ ಇಬ್ಬರನ್ನು ಹತ್ಯೆ ಮಾಡಿದೆ. ಇನ್ನಿಬ್ಬರು ತಪ್ಪಿಸಿಕೊಂಡಿದ್ದು ಸ್ಥಳಕ್ಕೆ ಅಧಿಕಾರಿಗಳು ಆಗಮಿಸಿ ಪರಿಶೀಲನೆ ನಡೆಸಿದ್ದಾರೆ ಎಂದು ವರದಿಯಾಗಿದೆ.