ನವದೆಹಲಿ, ಜು 29 (DaijiworldNews/PY): ಕೇಂದ್ರ ಸರ್ಕಾರವು ಜಮ್ಮು-ಕಾಶ್ಮೀರದಲ್ಲಿ ಸಂವಿಧಾನದ 370ನೇ ವಿಧಿಯನ್ನು ರದ್ದು ಮಾಡಿದ್ದ ಈ ತೀರ್ಮಾನದಿಂದ ಕಣಿವೆ ಪ್ರದೇಶದಲ್ಲಿನ ಭದ್ರತಾ ಪರಿಸ್ಥಿತಿ ಉತ್ತಮವಾಗಿದೆ ಎಂದು ವರದಿ ತಿಳಿಸಿದೆ.
ಕೇಂದ್ರ ಸರ್ಕಾರವು 2019ರ ಆಗಸ್ಟ್ 5ರಂದು 370ನೇ ವಿಧಿ ರದ್ದುಗೊಳಿಸಿದ್ದ ಕಾರಣ ಸಕಾರಾತ್ಮಕ ಪರಿಣಾಮ ಬೀರಿದ್ದು, ಕಣಿವೆ ಪ್ರದೇಶದಲ್ಲಿ ಭದ್ರತಾ ಪರಿಸ್ಥಿತಿ ಸುಧಾರಿಸಿವೆ.
ಕೇಂದ್ರ ಗೃಹ ಸಚಿವಾಲಯದ ವರದಿಯ ಪ್ರಕಾರ, ಆಗಸ್ಟ್ 5ರ ನಂತರ ಕಾಶ್ಮೀರಿ ಕಣಿವೆ ಪ್ರದೇಶದಲ್ಲಿ ಹಿಂಸಾಚಾರದ ಪ್ರಮಾಣ ಕಡಿಮೆಯಾಗಿದೆ. ಹಾಗೂ ಭದ್ರತಾ ಪಡೆಗಳು ಭಯೋತ್ಪಾದಕರ ವಿರುದ್ಧ ದೊಡ್ಡ ಯಶಸ್ಸನ್ನು ಸಾಧಿಸಿವೆ. 370 ನೇ ವಿಧಿಯನ್ನು ರದ್ದುಪಡಿಸಿದ ನಂತರ ಕಣಿವೆಯಲ್ಲಿ ಭಯೋತ್ಪಾದನೆ ಸಂಬಂಧಿತ ಚಟುವಟಿಕೆಗಳು ಸುಮಾರು 36% ರಷ್ಟು ಕಡಿಮೆಯಾಗಿದೆ ಎಂದು ವರದಿಯಲ್ಲಿ ಉಲ್ಲೇಖಿಸಲಾಗಿದೆ.